More

    ಕೂಲಿ ಮಾಡುವ ತಾಯಂದಿರಿಗಾಗಿ ಕೂಸಿನ ಮನೆ

    ಕೊಳ್ಳೇಗಾಲ: ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ಕೂಲಿ ಕೆಲಸ ಮಾಡುವ ತಾಯಂದಿರ ಮಕ್ಕಳ ಹಿತದೃಷ್ಟಿಯಿಂದ ಕೂಸಿನ ಮನೆ ಯೋಜನೆ ಪ್ರಾರಂಭಿಸಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

    ತಾಲೂಕಿನ ಕುಂತೂರು ಹಾಗೂ ಟಗರಪುರ ಗ್ರಾಮಗಳಲ್ಲಿ ನಿರ್ಮಿಸಲಾಗಿರುವ ಕೂಸಿನ ಮನೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿವೆ. ಈ ಪೈಕಿ 4 ಸಾವಿರ ಪಂಚಾಯಿತಿಗಳಲ್ಲಿ ಕೂಸಿನ ಮನೆ ಯೋಜನೆ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ 90 ಕೂಸಿನ ಮನೆ ನಿರ್ಮಾಣಕ್ಕೆ ಅವಕಾಶವಿದೆ. ಈ ಪೈಕಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 23 ಗ್ರಾಪಂನಲ್ಲಿ ಕೂಸಿನ ಮನೆ ನಿರ್ಮಿಸಲಾಗುವುದು ಎಂದರು.

    ಗ್ರಾಮೀಣ ಪ್ರದೇಶದಲ್ಲಿರುವ ತಾಯಂದಿರು ನರೇಗಾದಡಿ ಕೂಲಿ ಕೆಲಸಕ್ಕೆ ಹೋಗ ಬೇಕಾದರೆ ತಮ್ಮ ಸಣ್ಣ ಮಕ್ಕಳನ್ನು ನೋಡಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಅವರು ಕೂಲಿಗೆ ತೆರಳಿದ ವೇಳೆ ಅವರ ಮಕ್ಕಳನ್ನು ಪೋಷಣೆ ಮಾಡಲು ಕೂಸಿನ ಮನೆಯನ್ನು ಸರ್ಕಾರ ನಿರ್ಮಿಸುತ್ತಿದೆ. ಒಂದು ಕೂಸಿನ ಮನೆಗೆ 1 ಲಕ್ಷ ರೂ. ಅನುದಾನ ನೀಡಲಾಗಿದೆ. ತಾಲೂಕು ಪಂಚಾಯಿತಿಯಿಂದ 8 ಸಾವಿರ ರೂ. ಹೆಚ್ಚುವರಿ ಅನುದಾನ ನೀಡಲಾಗುತ್ತಿದೆ. ಕೂಸಿನ ಮನೆಯಲ್ಲಿರುವ ಕೇರ್ ಟೇಕರ್‌ಗಳು ಮಕ್ಕಳನ್ನು ನೋಡಿಕೊಳ್ಳುತ್ತಾರೆ. ಈ ಯೋಜನೆಯನ್ನು ತಾಯಂದಿರು ಸದ್ಬಳಕ್ಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
    ಟಗರಪುರ ಗ್ರಾಪಂ ಅಧ್ಯಕ್ಷ ಮಹದೇವಸ್ವಾಮಿ, ಉಪಾಧ್ಯಕ್ಷೆ ರಾಜಮ್ಮ, ಇಒ ಶ್ರೀನಿವಾಸ್, ಗೋಪಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts