ಪುತ್ತೂರು: ಕೃಷ್ಣ ನಗರ ಎಂಬಲ್ಲಿ ಎರಡು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ(23)ಮೃತಪಟ್ಟವರು. ಹೆರಿಗೆ ಬಳಿಕ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಅಕ್ಷತಾ ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು.
#BBK8: ಸೆಕೆಂಡ್ ಇನ್ನಿಂಗ್ಸ್ ಮೊದಲನೇ ವಾರವೇ ಪ್ರಶಾಂತ್ ಔಟ್! ಯಾರ ಕಣ್ಣಿಗೂ ಕಾಣದಂತಾದ ಸಂಬರಗಿ!