More

    VIDEO| ಹಮಾಸ್ ಉಗ್ರರ ದಾಳಿ; ಯುದ್ದಪೀಡಿತ ಇಸ್ರೇಲ್​ನಿಂದ ಭಾರತಕ್ಕೆ ಮರಳಿದ ನಟಿ ನುಶ್ರತ್​ ಭರುಚ್ಚ

    ಮುಂಬೈ: ಪ್ರಸ್ತುತ ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರ ಗುಂಪಿನ ನಡುವೆ ಉಂಟಾಗಿರುವ ಸಂಘರ್ಷದ ನಡುವೆ ಯುದ್ಧ ಪೀಡಿತ ಪ್ರದೇಶದಲ್ಲೇ ಸಿಲುಕಿದ್ದ ಬಾಲಿವುಡ್​ ನಟಿ ನುಶ್ರತ್ ಭರುಚ್ಚ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ.

    ಹೈಫಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಮ್ಮ ನಟನೆಯ ಅಕೆಲ್ಲಿಯ ಪ್ರದರ್ಶನಕ್ಕಾಗಿ ನುಶ್ರತ್ ಭರುಚ್ಚ ಇಸ್ರೇಲ್​ಗೆ ತೆರಳಿದ್ದರು. ಮಧ್ಯಾಹ್ನ 2 ಘಂಟೆ ಸುಮಾರಿಗೆ ಅವರು ಮುಂಬೈನಲ್ಲಿರುವ ಛತ್ರಪತಿ ವಿಮಾಣ ನಿಲ್ದಾಣಕ್ಕೆ ಬಂದಿಳಿದಿದ್ಧಾರೆ.

    ಯುದ್ಧ ಪೀಡಿತ ಇಸ್ರೇಲ್​ನಲ್ಲೇ ನಟಿ ನುಶ್ರತ್​ ಅವರು ಸಿಲುಕಿಕೊಂಡಿದ್ದು, ಅವರ ಕುಟುಂಬವನ್ನು ಆತಂಕಕ್ಕೆ ದೂಡಿತ್ತು. ಆದರೆ, ಇದೀಗ ಅವರು ಸುರಕ್ಷಿತವಾಗಿ ಭಾರತಕ್ಕೆ ಬಂದಿಳಿದಿದ್ದಾರೆ.

    ಇದಕ್ಕೂ ಮುನ್ನ ಮಾತನಾಡಿದ್ದ ನುಶ್ರತ್​ ತಂಡದ ಸದಸ್ಯರೊಬ್ಬರು ದುರಾದೃಷ್ಟವಶಾತ್​ ಸಂಘರ್ಷ ಪೀಡಿತ ಇಸ್ರೇಲ್​ನಲ್ಲಿ ನುಶ್ರತ್​ ಸಿಲುಕಿದ್ದಾರೆ. ಹೈಫಾ ಅಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಸ್ರೇಲ್​ಗೆ ಹಾರಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ಕೊನೆಯ ಬಾರಿಗೆ ಆಕೆಯೊಂದಿಗೆ ಸಂಪರ್ಕ ಸಾಧಿಸಿದ್ದೆ. ಬೇಸ್​ಮೆಂಟ್​ ಒಂದರಲ್ಲಿ ಸುರಕ್ಷಿತವಾಗಿ ಇರುವುದಾಗಿ ತಿಳಿಸಿದರು.

    ಇದನ್ನೂ ಓದಿ: VIDEO| ನನ್ನನ್ನು ಕೊಲ್ಲಬೇಡಿ ಎಂದು ಅಂಗಲಾಚಿದರು ಮಹಿಳೆಯನ್ನು ಬಿಡದ ಹಮಾಸ್ ಉಗ್ರರು

    ಇದಾದ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ನುಶ್ರತ್​ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ಎಲ್ಲ ಪ್ರಯತ್ನವನ್ನು ಮಾಡುತ್ತಿದ್ದೇವೆ ಮತ್ತು ಯಾವುದೇ ಹಾನಿಯಾಗದೇ, ಆರೋಗ್ಯಯುತವಾಗಿಯೇ ಆಕೆ ತವರಿಗೆ ಮರಳುತ್ತಾಳೆ ಎಂದು ಭರವಸೆ ಇದೆ ಎಂದು ನುಶ್ರತ್​ ತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದರು.

    ಇಸ್ರೇಲ್- ಪ್ಯಾಲೆಸ್ತೀನ್ ವಿವಾದವೇನು?

    ಇಸ್ರೇಲ್- ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಸುಮಾರು ನೂರು ವರ್ಷಗಳಿಂದ ನಡೆಯುತ್ತಿದೆ. ವೆಸ್ಟ್ ಬ್ಯಾಂಕ್, ಗಾಜಾ ಪಟ್ಟಿ ಮತ್ತು ಗೋಲನ್ ಹೈಟ್ಸ್ ಇನ್ನಿತರ ಪ್ರದೇಶಗಳ ಮೇಲಿನ ಹಕ್ಕಿನ ಬಗ್ಗೆ ಎರಡೂ ದೇಶಗಳ ನಡುವೆ ವಿವಾದ ಇದೆ. ಪೂರ್ವ ಜೆರುಸಲೆಮ್ ಸೇರಿ ಈ ಪ್ರದೇಶಗಳನ್ನು ಪ್ಯಾಲೆಸ್ತೀನ್ ತನ್ನದು ಎಂದು ಹೇಳಿಕೊಳ್ಳುತ್ತಿದೆ. ಆದರೆ ಇಸ್ರೇಲ್ ಜೆರುಸಲೆಮ್ ಮೇಲಿನ ಹಕ್ಕನ್ನು ಸಾಧಿಸುತ್ತಿದೆ.

    ಗಾಜಾ ಪಟ್ಟಿ ಎಂದರೇನು? : ಗಾಜಾ ಪಟ್ಟಿ ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಇದೆ. ಈ ಸ್ಥಳವು ಪ್ರಸ್ತುತ ಹಮಾಸ್ ಉಗ್ರರ ನಿಯಂತ್ರಣದಲ್ಲಿದೆ. ಹಮಾಸ್ ಎಂಬುದು ಇದು ಇಸ್ರೇಲ್ ವಿರೋಧಿ ಗುಂಪು. ಸೆಪ್ಟೆಂಬರ್ 2005 ರಲ್ಲಿ ಇಸ್ರೇಲ್, ಗಾಜಾ ಪಟ್ಟಿಯಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಂಡಿತು. ನಂತರ ಈ ಪ್ರದೇಶದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿತು. ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಸ್ವತಂತ್ರ ಪ್ಯಾಲೆಸ್ಟೈನ್ ರಾಜ್ಯವನ್ನು ಸ್ಥಾಪಿಸಬೇಕು ಎಂದು ಪ್ಯಾಲೆಸ್ತೀನ್ ಹೋರಾಟ ನಡೆಸುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts