More

    ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ. ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

    ಬೆಂಗಳೂರು: ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ. ಅಂಜಾರಿಯಾ ಭಾನುವಾರ (ಫೆಬ್ರವರಿ 25) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​ವೆಂದ್​ ಗೆಹ್ಲೋತ್​ ಸೂತನ ಸಿಜೆಐಗೆ ಪ್ರಮಾಣ ವಚನ ಬೋಧನೆ ಮಾಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ್​ ಹೊರಟ್ಟಿ ಉಪಸ್ಥಿತರಿದ್ದರು.

    ಇದನ್ನೂ ಓದಿ: ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್​ ಮೈಂಡ್​ ಅರೆಸ್ಟ್​; ಬಂಧಿತರ ಸಂಖ್ಯೆ 81ಕ್ಕೆ ಏರಿಕೆ

    ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು. ನವೆಂಬರ್ 21, 2011 ರಿಂದ, ನ್ಯಾಯಮೂರ್ತಿ ಅಂಜಾರಿಯಾ ಅವರು ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಪ್ರಸ್ತುತ ಕರ್ನಾಟಕದ ಮುಖ್ಯ ನ್ಯಾಯಮೂರ್ತಿಯಾಗಿರುವ ಪಿ.ಎಸ್.ದಿನೇಶ್ ಕುಮಾರ್ ಅವರು ಇದೇ ತಿಂಗಳು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕೊಲಿಜಿಯಂ ಎನ್‌.ವಿ.ಅಂಜಾರಿಯಾ ಅವರನ್ನು ಶಿಫಾರಸು ಮಾಡುತ್ತಿದೆ ಎಂದು ಬಹಿರಂಗಪಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts