More

    ಛತ್ರಿ ಹಿಡಿದು ಚಾಲಕನ ಬಸ್​ ಸವಾರಿ; NWKRTC ಕೊಟ್ಟ ಸ್ಪಷ್ಟನೆ ಹೀಗಿದೆ

    ಹಾವೇರಿ: ರಾಜ್ಯ ರಸ್ತೆ ಸಾರಿಗೆ ನೀಗಮದ ವ್ಯಾಪ್ತಿಗೆ ಬರುವ NWKRTC ಬಸ್​ ಚಾಲಕರೊಬ್ಬರು ಛತ್ರಿ ಹಿಡಿದು ವಾಹನ ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಇತ್ತ ವಿಡಿಯೋ ವೈರಲ್​ ಆದ ಬಳಿಕ ಹಲವರು ರಾಜ್ಯ ಸರ್ಕಾರದ ಹಾಗೂ ಸಾರಿಗೆ ಸಂಸ್ಥೆಯ ವಿರುದ್ಧ ಕಿಡಿಕಾರಿದ್ದರು. ಇದೀಗ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಸಂಸ್ಥೆ ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಎಂದು ಹೇಳಿದೆ.

    ಈ ಕುರಿತು ಪ್ರಕಟಣೆ ಹೊರಡಿಸಿರುವ NWKRTC, ದಿನಾಂಕ: 23-05-2024 ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೆಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಶ್ರೀ ಹನುಮಂತಪ್ಪ ಅ ಕಿಲ್ಲೇದಾರ, ಬಿ.ಸಂ-1203 D ಹಾಗೂ ನಿರ್ವಾಹಕರಾಗಿ ಶ್ರೀಮತಿ ಅನಿತಾ ಎಚ್. ಬಿ ಸಂ-396 ರವರು ಕರ್ತವ್ಯ ನಿರ್ವಹಿಸುತ್ತಿದ್ದರು.

    ಇದನ್ನೂ ಓದಿ: ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಅವಧಿ ಮೀರಿದ ಆಹಾರ ಪದಾರ್ಥ, ನಿಯಮ ಉಲ್ಲಂಘನೆ ಪತ್ತೆ

    ಮಳೆ ಬರುತ್ತಿದ್ದ ಆ ಸಮಯದಲ್ಲಿ ಅಂದರೆ ಸುಮಾರು 04:30 ಕ್ಕೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಇದ್ದುದರಿಂದ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು, ಹಿಡಿದುಕೊಂಡು ವಾಹನ ಚಾಲನೆ ಮಾಡಿರುತ್ತಾರೆ. ಇದನ್ನು ಸದರಿ ನಿರ್ವಾಹಕಿಯು ವಿಡಿಯೋ ಚಿತ್ರೀಕರಣ ಮಾಡಿರುತ್ತಾರೆ. ಆ ಸಮಯದಲ್ಲಿ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಾಗಲಿ ಸೋರಿಕೆ (Roof Leakage) ಇರಲಿಲ್ಲ ಎಂದು ತಿಳಿದುಬಂದಿರುತ್ತದೆ.

    ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲು ಆಗಿರುವುದಿಲ್ಲ. ಸದರಿ ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿ ಮೇಲ್ಚಾವಣಿಯು ಸೋರದೆ ಇರುವುದನ್ನು ಖಚಿತಪಡಿಸಿಕೊಳ್ಳಲಾಗಿದೆ. ಈ ಕುರಿತು ಸದರಿ ಚಾಲನಾ ಸಿಬ್ಬಂದಿಗಳಿಂದ ಸ್ಪಷ್ಟೀಕರಣ ಪಡೆಯಲಾಗಿ ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts