ನ್ಯಾಮತಿ ಆಸ್ಪತ್ರೆಗೆ ನೂತನ ಆಂಬ್ಯುಲೆನ್ಸ್

ಹೊನ್ನಾಳಿ: ನ್ಯಾಮತಿ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಆರೋಗ್ಯ ಸಚಿವರ ಜತೆ ಚರ್ಚೆ ನಡೆಸಿದ್ದೇನೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ನ್ಯಾಮತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ನೂತನ ಆಂಬ್ಯುಲೆನ್ಸ್‌ಗೆ ಚಾಲನೆ ನೀಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ 10 ಹಾಸಿಗೆಯಿಂದ 30 ಹಾಸಿಗೆಗೆ ಮೇಲ್ದರ್ಜೆಗೆ ಏರಿಸಲಾಗಿತ್ತು. ಈಗ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳದ ಕಾರಣ 100 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಆರೋಗ್ಯ ಸಚಿವರ ಜತೆ ಚರ್ಚಿಸಲಾಗಿದೆ ಎಂದರು.

ನ್ಯಾಮತಿ ಗ್ರಾಪಂ ಅಧ್ಯಕ್ಷೆ ರೇಣುಕಮ್ಮ, ಉಪಾಧ್ಯಕ್ಷೆ ಸುನೀತಾ, ತಾಪಂ ಉಪಾಧ್ಯಕ್ಷ ರವಿಕುಮಾರ್ ಇತರರಿದ್ದರು.