More

  ಸಕಾಲದಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಿ

  ನ್ಯಾಮತಿ: ಸರ್ಕಾರಿ ಕಚೇರಿಗೆ ಬರುವ ಸಾರ್ವಜನಿಕರಿಗೆ ಸಕಾಲಕ್ಕೆ ಕೆಲಸ- ಕಾರ್ಯಗಳನ್ನು ಇತ್ಯರ್ಥ ಮಾಡಿಕೊಡಬೇಕು. ಪ್ರಾಮಾಣಿಕವಾಗಿ ಕರ್ತವ್ಯ ಪಾಲನೆ ಮಾಡಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

  ಪಟ್ಟಣದ ಮಹಾಂತೇಶ್ವರ ಕಲ್ಯಾಣ ಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ, ಮಾತನಾಡಿದರು.

  ಬಿತ್ತನೆ ಮಾಡಿದ ಬೆಳೆಗೆ ವಾರದೊಳಗೆ ಮಳೆ ಬಾರದಿದ್ದರೆ ಮತ್ತೊಮ್ಮೆ ಸಂಕಷ್ಟ ಎದುರಿಸಬೇಕಾಗುತ್ತದೆ. ದೇವರ ದಯೆಯಿಂದ ಮಳೆ ಬರುವಂತೆ ಪ್ರಾರ್ಥಿಸೋಣ. ಇಂತಹ ವೇಳೆ ಇಲಾಖೆಯವರು ಕೃಷಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.

  ನಿಕಟಪೂರ್ವ ಅಧ್ಯಕ್ಷ ಎಂ.ಬಿ. ನಿಂಗಪ್ಪ ಅವರಿಂದ ನೂತನ ಅಧ್ಯಕ್ಷ ಎಸ್. ಸಂತೋಷ ಮತ್ತು ರಾಜ್ಯ ಪರಿಷತ್‌ನ ನಿಕಟಪೂರ್ವ ಸದಸ್ಯ ಸುಧೀರ್ ಅವರಿಂದ ವಿಶ್ವನಾಥ ಅಧಿಕಾರ ಸ್ವಿಕರಿಸಿದರು.

  ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಸನ್ಮಾಸಲಾಯಿತು.

  ಪೌಢಶಾಲೆಯ ಸಹ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಉಪ ವಿಭಾಗಾಧಿಕಾರಿ ವಿ.ಅಭಿಷೇಕ, ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ ಎಸ್. ಒಡೇನಪುರ, ಗೌರವ ಅಧ್ಯಕ್ಷ ಬಿ. ಪಾಲಾಕ್ಷ, ತಹಸೀಲ್ದಾರ್ ಎಚ್.ಬಿ. ಗೋವಿಂದಪ್ಪ, ಹೊನ್ನಾಳಿ ಘಟಕದ ಅಧ್ಯಕ್ಷ ಪಾಟೀಲ, ಬಿಇಒ ಎಂ. ತಿಪ್ಪೇಶಪ್ಪ, ಅಕ್ಷರ ದಾಸೋಹ ರುದ್ರಪ್ಪ, ಬಿಸಿಎಂ ಅಧಿಕಾರಿ ಎಂ. ಮೃತ್ಯುಂಜಯ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಸ್.ಎಲ್. ಉಮಾ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ. ರಾಮ ಇತರರಿದ್ದರು.

  See also  ರೈತರಿಗೆ ಸೌಲಭ್ಯ ದೊರಕಿಸಲು ಪ್ರಾಮಾಣಿಕ ಯತ್ನ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts