More

    ವಿಡಿಯೋ ಚಿತ್ರಿಕರಣ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

    ನ್ಯಾಮತಿ: ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರಿಕರಣ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ವಿದ್ಯಾರ್ಥಿನಿಯರನ್ನು ಪೊಲೀಸರು ಇದುವರೆಗೂ ವಿಚಾರಣೆ ನಡೆಸದೆ ಇರುವುದನ್ನು ನೋಡಿದರೆ ಸರ್ಕಾರ ಅವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎನ್ನಿಸುತ್ತಿದೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.

    ತಾಲೂಕಿನ ಕೊಡತಾಳು, ಮಾದಾಪುರ, ಸವಳಂಗ, ಸೋಗಿಲು, ಸೋಗಿಲು ತಾಂಡಾ, ಚಟ್ನಹಳ್ಳಿ, ಯರೇಮಡು, ಗಂಜೇನಹಳ್ಳಿ, ಕಂಚಿಗನಹಳ್ಳಿ, ಕೋಡಿಕೊಪ್ಪ, ಕೆಂಚಿಕೊಪ್ಪ, ಆರುಂಡಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೇಂದ್ರ ಸರ್ಕಾರದ ಒಂಬತ್ತು ವರ್ಷದ ಸಾಧನೆಗಳ ಕರಪತ್ರ ವಿತರಿಸಿ ಅವರು ಮಾತನಾಡಿದರು.

    ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸದಂತೆ ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಕೆ, ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ರಾಜ್ಯ ಸರ್ಕಾರ ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

    ಸಾಮಾಜಿಕ ಜಾಲತಾಣದಲ್ಲಿ ಸಿಎಂ ಕುಟುಂಬಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ ತುಮಕೂರಿನ ಬಿಜೆಪಿ ಕಾರ್ಯಕರ್ತೆಯನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

    ಮುಖ್ಯ ಮಂತ್ರಿಗಳ ಕುಟುಂಬದ ಬಗ್ಗೆ ಮಾತನಾಡಿದರೆ ಬಂಧಿಸುತ್ತೀರಿ. ಅದೇ ವಿದ್ಯಾರ್ಥಿನಿಯರಿಗೆ ಸಂಬಂಧಿಸಿದಂತೆ ವಿಡಿಯೋ ಚಿತ್ರಿಸಿರುವವರನ್ನು ಮಾತ್ರ ಈವರೆಗೂ ಏಕೆ ಬಂಧಿಸಿಲ್ಲ, ಹಾಗಾದರೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದರು.

    ಗೃಹ ಸಚಿವ ಜಿ.ಪರಮೇಶ್ವರ್ ಈ ಗಂಭೀರ ಪ್ರಕರಣವನ್ನು ಮಕ್ಕಳಾಟಕ್ಕೆ ಹೋಲಿಸಿರುವುದು ಸರಿಯಲ್ಲ, ಅವರು ರಾಜಕೀಯದಲ್ಲಿ ಬಹಳ ಹಿರಿಯರು, ಅವರು ಯೋಚನೆ ಮಾಡಿ ಮಾತನಾಡಬೇಕು ಎಂದರು.

    ಈ ಸಂದರ್ಭ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಗಿರೀಶ್, ಕೋಮೇಶ್, ಪ್ರಭು, ಹುತ್ತೇಶ್, ಗಜೇಂದ್ರ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts