ನ್ಯಾಮತಿ: ತಾಲೂಕಿನ ತೀರ್ಥರಾಮೇಶ್ವರ ಪುಣ್ಯಕ್ಷೇತ್ರದಲ್ಲಿ ಸೋಮವಾರ ಗೋವಿನಕೋವಿ ಗ್ರಾಮದ ಶ್ರೀ ನರಸಿಂಹ, ಬಸವೇಶ್ವರಸ್ವಾಮಿ ಉತ್ಸವ ಮೂರ್ತಿಗಳಿಗೆ ಜಲಾಭಿಷೇಕ ನೆರವೇರಿಸಲಾಯಿತು.

ಉತ್ಸವ ಮೂರ್ತಿಗಳನ್ನು ಗ್ರಾಮದಿಂದ ಶ್ರೀಕ್ಷೇತ್ರಕ್ಕೆ ಮೆರವಣಿಗೆ ಮೂಲಕ ಕೊಂಡೊಯ್ದು ವಿಶೇಷ ಪೂಜೆ, ಅಭಿಷೇಕ, ಮಂಗಳಾರತಿ, ನೈವೇದ್ಯ ಅರ್ಪಿಸಿ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಬಳಿಕ ಗ್ರಾಮಕ್ಕೆ ಮರಳಿ ಕೊಂಡೊಯ್ಯಲಾಯಿತು.