More

    ಸ್ವ ಉದ್ಯೋಗದಿಂದ ಸ್ವಾವಲಂಬಿ ಜೀವನ

    ನ್ಯಾಮತಿ: ಮಹಿಳೆಯರು ಆಧುನಿಕ ಜಗತ್ತಿನ ಬದುಕಿನ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿ ಕುಟುಂಬಕ್ಕೆ ಸಹಕಾರಿ ಆಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ್ ಅಭಿಪ್ರಾಯಪಟ್ಟರು.

    ತಾಲೂಕಿನ ಒಡೆಯರಹತ್ತೂರು ವಲಯದ ಬಸವನಹಳ್ಳಿ ಕಾರ್ಯ ಕ್ಷೇತ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಮತ್ತು ಹೊಲಿಗೆ ತರಬೇತಿ ಮುಕ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮಹಿಳೆಯರು ಸ್ವತಃ ಆತ್ಮಸ್ಥೈರ್ಯ ತಂದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕು. ಟೈಲರಿಂಗ್, ಫ್ಯಾಷನ್ ಡಿಸೈನಿಂಗ್ ಮತ್ತಿತರ ಕೌಶಲ ಕಲಿತು ಸ್ವ ಉದ್ಯೋಗ ಕೈಗೊಳ್ಳಬೇಕು. ಈ ಮೂಲಕ ಕುಟುಂಬದ ಆರ್ಥಿಕ ಏಳಿಗೆಗೆ ಕೈಜೋಡಿಸಬೇಕು ಎಂದರು.

    ತಾಲೂಕು ಯೋಜನಾಧಿಕಾರಿ ಬಸವರಾಜ್ ಅಂಗಡಿ ಮಾತನಾಡಿದರು. ಕೇಕ್ ಕತ್ತರಿಸುವ ಮೂಲಕ ವಿಶ್ವ ಮಹಿಳಾ ದಿನ ಆಚರಿಸಿ, ಮಹಿಳೆಯರಿಗೆ ಗೌರವ ಸೂಚಿಸಲಾಯಿತು.

    ಹೊಲಿಗೆ ತರಬೇತಿ ಅವಧಿ ಪೂರ್ಣಗೊಳಿಸಿದ 40 ಅಭ್ಯರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಯೋಜನೆಯ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಸ್ತಾಂತರ ಮಾಡಲಾಯಿತು.

    ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಸದಸ್ಯ ಹರೀಶ್, ಒಕ್ಕೂಟದ ಅಧ್ಯಕ್ಷೆ ಹಾಲಮ್ಮ, ಉಪಾಧ್ಯಕ್ಷೆ ಗೌರಮ್ಮ, ಕಾರ್ಯದರ್ಶಿ ವಾಣಿ, ಮೇಲ್ವಿಚಾರಕ ಪ್ರಕಾಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಶ್ರೀ, ಸೇವಾ ಪ್ರತಿನಿಧಿಗಳಾದ ಕವಿತಾ, ಚಂದ್ರಕಲಾ, ರೇಖಾ, ವಿ.ಎ.ದರ್ಶನ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts