ಹೋರಾಡುತ್ತಿರುವವರಿಗೆ ಭಾರತ್​ ಜೋಡೋ ನ್ಯಾಯ್​ ಯಾತ್ರೆ ಉತ್ತಮ ವೇದಿಕೆ: ರಾಹುಲ್ ಗಾಂಧಿ

Rahul Gandhi
Published on

ನವದೆಹಲಿ: ಜನವರಿ 14ರಿಂದ ಆರಂಭವಾಗಲಿರುವ ಭಾರತ್​ ಜೋಡೋ ನ್ಯಾಯ್​ ಯಾತ್ರೆಯನ್ನು ನ್ಯಾಯಕ್ಕಾಗಿ ಹೋರಾಡುತ್ತಿರುವವರು ವೇದಿಕೆಯಾಗಿ ಬಳಸಿಕೊಳ್ಳಬೇಕು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೇಳಿದ್ದಾರೆ.

ಮಣಿಪುರದಿಂದ ಜನವರಿ 14ರಂದು ಆರಂಭವಾಗಲಿರುವ ಯಾತ್ರೆ ಹಿನ್ನೆಲೆಯಲ್ಲಿ ನಾಗರಿಕ ಸಂಘಟನೆಗಳು ಹಾಗೂ ಜನಪರ ಚಳವಳಿಗಳ ಪ್ರತಿನಿಧಿಗಳ ಜೊತೆ ನಡೆಸಿದ ಸಂವಾದದಲ್ಲಿ ರಾಹುಲ್​ ಗಾಂಧಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನಿಂದ ಆಗುತ್ತಿರುವ ಅನ್ಯಾಯ ಎದುರಿಸುವಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿರುವ ರಾಜಕೀಯ ಪಕ್ಷಗಳು, ಸಂಘಟನೆಗಳು ಹಾಗೂ ವ್ಯಕ್ತಿಗಳು ಒಂದಾಗುವುದು ನಿರ್ಣಾಯಕವಾಗಲಿದೆ. ದೇಶದಲ್ಲಿ ದಲಿತರು, ಆದಿವಾಸಿಗಳು, ಒಬಿಸಿಗಳು, ಮಹಿಳೆಯರು, ನಿರುದ್ಯೋಗಿ ಯುವ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ರಾಹುಲ್​ ಚರ್ಚಿಸಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನವರಿ 14ರಂದು ಇಂಫಾಲ್‌ನಿಂದ ಮಧ್ಯಾಹ್ನ 12.30 ಕ್ಕೆ ಪ್ರಾರಂಭವಾಗಲಿದೆ. ಇದು ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಅರುಣಾಂಚಲ್ ಪ್ರದೇಶ, ಮೇಘಾಲಯ ಮೂಲಕ ಹಾದುಹೋಗುತ್ತದೆ. ಇದು ಮಧ್ಯ ಭಾರತವನ್ನು ತಲುಪುವ ಮೊದಲು ಬಂಗಾಳವನ್ನು ತಲುಪುತ್ತದೆ.

ಪಕ್ಷದ ಹಿರಿಯ ನಾಯಕರ ಆರೋಗ್ಯದ ಕಾಳಜಿಯಂತೆ ಸಾರ್ವತ್ರಿಕ ಚುನಾವಣೆಯ ಸಮಯದ ನಿರ್ಬಂಧದಿಂದಾಗಿ ಬದಲಾವಣೆಯಾಗಿದೆ. ನಾವು ಇಂಡಿಯಾ ಮೈತ್ರಿಕೂಟದ ಎಲ್ಲಾ ಪಕ್ಷಗಳ ನಾಯಕರು, ಅವರ ಬೆಂಬಲಿಗರು, ಸಾರ್ವಜನಿಕರು ಮತ್ತು ಎನ್‌ಜಿಒಗಳನ್ನು ಯಾತ್ರೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net