ಓಬವ್ವ ಇತಿಹಾಸದ ಪುಟದಲ್ಲಿ ಅಜರಾಮರ

obavva

ಶಿವಮೊಗ್ಗ: ಮಹಿಳೆಯರಿಗೆ ಸೂಕ್ತ ಗೌರವ, ಸ್ಥಾನಮಾನಗಳು ಇಲ್ಲದ ಕಾಲದಲ್ಲಿ ಹೈದರಾಲಿ ಸೈನ್ಯದ ವಂಚನೆಯ ದಾಳಿಯಿಂದ ಚಿತ್ರದುರ್ಗ ಸಂಸ್ಥಾನವನ್ನು ರಕ್ಷಿಸುವ ಮೂಲಕ ಇಂದಿಗೂ ಓಬವ್ವ ಅಜರಾಮರವಾಗಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಜಗನ್ನಾಥ ಕೆ. ಡಾಂಗೆ ತಿಳಿಸಿದರು.
ಜಿಲ್ಲಾಡಳಿತದಿಂದ ಸೋಮವಾರ ಕುವೆಂಪು ರಂಗಮಂದಿರಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ನಮ್ಮ ದೇಶದಲ್ಲಿ ಅನೇಕ ರಾಣಿಯರು ಹೋರಾಟ ಮಾಡಿದ್ದನ್ನು ಓದಿದ್ದೇವೆ. ಆದರೆ ಸಾಮಾನ್ಯ ಮಹಿಳೆಯಾದ ಒನಕೆ ಓಬವ್ವನ ಹೋರಾಟ ಅತ್ಯಂತ ರೋಮಾಂಚಕ ಎಂದು ಬಣ್ಣಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್ ಮಾತನಾಡಿ, ಸಾಮಾನ್ಯ ಮಹಿಳೆ ಓಬವ್ವ ಶತ್ರುಗಳ ದಾಳಿಯಿಂದ ಒಂದು ಸಂಸ್ಥಾನವನ್ನು ಉಳಿಸಿ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಗೌರವಿಸಲ್ಪಟಿದ್ದಾಳೆ. ಆಕೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ವೀರ ಮಹಿಳೆ ಒನಕೆ ಓಬವ್ವಳ ಹೋರಾಟ ಅವಿಸ್ಮರಣಿಯ. ಶತ್ರುಗಳ ದಾಳಿಯಿಂದ ಸಂಸ್ಥಾನ ಉಳಿಸಲು ಆಕೆ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ್ದು ಶೌರ್ಯದ ಪ್ರತೀಕ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರತ್ನಾ ಮತ್ತು ಛಲವಾದಿ ಸಮಾಜದ ಮುಖಂಡರು ಇದ್ದರು.

Share This Article

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…

ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips

ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…