More

    ಹೊಸಪೇಟೆಯಲ್ಲಿ ಮತ ಎಣಿಕೆ ಆರಂಭಕ್ಕೂ ಮುನ್ನವೇ ಆಕ್ಷೇಪ!

    ಮತದಾರರ ಗುರುತು ಇರುವ ಅಂಚೆ ಮತ ತಿರಸ್ಕಾರಕ್ಕೆ ನೇಮಿರಾಜ್ ನಾಯ್ಕ ಒತ್ತಾಯ

    ಹೊಸಪೇಟೆ: ಅಂಚೆ ಮತಗಳ ಮೇಲೆ ಎಪಿಕ್ ನಂಬರ್ ಹಾಗೂ ಮತದಾರರು ಹೆಸರು ಬರೆದಿದ್ದಲ್ಲಿ ಅವುಗಳನ್ನು ಪರಿಗಣಿಸಬಾರದು ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ನೇಮಿರಾಜ ನಾಯ್ಕ ಆಕ್ಷೇಪಿಸಿದರು.

    ನಗರದ ಪಿಡಿಐಟಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿರುವ ಸ್ಥಾಪಿಸಿರುವ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೇಂದ್ರದಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಅಂಚೆ ಮತದಾನ ಆರಂಭಕ್ಕೆ ಸಿದ್ಧತೆ ಆರಂಭಗೊಳ್ಳುತ್ತಿದ್ದಂತೆ ಚುನಾವಣಾ ಅಧಿಕಾರಿಗಳಿಗೆ ಒತ್ತಾಯಿಸಿದರು.

    ಈ ವೇಳೆ ಮಧ್ಯೆ ಪ್ರವೇಶಿಸಿದ ಕಾಂಗ್ರೆಸ್ ಅಭ್ಯರ್ಥಿ ಭೀಮಾನಾಯ್ಕ ಮೊದಲು ಅಂಚೆ ಮತದಾನ ಆರಂಭವಾಗಲಿ. ಆಕ್ಷೇಪಗಳಿದ್ದಲ್ಲಿ ಆನಂತರ ಸಲ್ಲಿಸಲಿ ಎಂದರು. ಅದನ್ನು ಒಪ್ಪದ ಜೆಡಿಎಸ್ ಅಭ್ಯರ್ಥಿ ನೇಮಿರಾಜ ನಾಯ್ಕ, ಯಾವುದೇ ಕಾರಣಕ್ಕೂ ಅಂಚೆ ಮತಗಳ ಮೇಲೆ ಮತದಾರರು ತಮ್ಮ ಎಪಿಕ್ ಕಾರ್ಡ್, ಹೆಸರು ಬರೆದಿದ್ದರೆ ಪರಿಗಣಿಸಬಾರದು ಎಂದು ಲಿಖಿತ ಅರ್ಜಿ ಸಲ್ಲಿದರು.

    ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

    2018ರ ಫಲಿತಾಂಶ ಏನಿತ್ತು?

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.

    73.19 ದಾಖಲೆ ಮತದಾನ: ಈ ಬಾರಿ ದಾಖಲೆಯ ಶೇ.73.19 ಮತದಾನವಾಗಿರುವುದರಿಂದ ರಾಜಕೀಯ ಪಕ್ಷಗಳಲ್ಲಿ ನಾನಾ ರೀತಿಯ ಲೆಕ್ಕಾಚಾರಕ್ಕೆ ಇಂಬು ಮಾಡಿಕೊಟ್ಟಿದೆ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿರುವುದು ನಮಗೆ ಲಾಭ ತಂದುಕೊಡಲಿದೆ ಎಂದು ಬಿಜೆಪಿ ನಾಯಕರ ವಾದ. ಆದರೆ, ಅತಿ ಕಡಿಮೆ ಮತದಾನವಾದಾಗಲೂ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿರುವ ಉದಾಹರಣೆಗಳಿವೆ. ಅಂತೆಯೇ, ಅತೀ ಹೆಚ್ಚು ಮತದಾನವಾದಾಗಲೂ ಬಿಜೆಪಿಗೆ ಲಾಭವಾಗದಿರುವ ದಾಖಲೆಗಳೂ ನಮ್ಮ ಮುಂದಿವೆ. ಹೀಗಾಗಿ ಈ ಬಾರಿಯ ಫಲಿತಾಂಶ ಊಹೆಗೆ ನಿಲುಕದಂತಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts