More

    ಕನ್ನಡ ಬಾವುಟದಲ್ಲಿ ರಾಹುಲ್ ಗಾಂಧಿ ಫೋಟೋ; ಕನ್ನಡ ಸಂಘಟನೆಯಿಂದ ಆಕ್ಷೇಪ..

    ಬೆಂಗಳೂರು: ಭಾರತ್ ಜೋಡೋ ಯಾತ್ರೆ ವೇಳೆ ಕನ್ನಡ ಬಾವುಟದಲ್ಲಿ ರಾಹುಲ್ ಗಾಂಧಿಯ ಭಾವಚಿತ್ರ ಬಳಸಿದ್ದು ಕಂಡುಬಂದಿದ್ದು, ಇದಕ್ಕೆ ಈಗ ಕನ್ನಡ ಸಂಘಟನೆಯೊಂದು ವಿರೋಧ ವ್ಯಕ್ತಪಡಿಸಿದ್ದಲ್ಲದೆ, ರಾಹುಲ್ ಗಾಂಧಿ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂಬುದಾಗಿಯೂ ಆಗ್ರಹಿಸಿದೆ.

    ಕನ್ನಡಿಗರ ಸ್ವಾಭಿಮಾನ ಮತ್ತು ಅಸ್ಮಿತೆಯ ಪ್ರತೀಕವಾಗಿರುವ ಕನ್ನಡ ಬಾವುಟದಲ್ಲಿ ರಾಹುಲ್ ಗಾಂಧಿ ಅವರ ಭಾವಚಿತ್ರವನ್ನು ಬಳಸಿರುವ ಕರ್ನಾಟಕ ಕಾಂಗ್ರೆಸ್ ಪಕ್ಷದ ನಡೆಯನ್ನು ಕರ್ನಾಟಕ ನವನಿರ್ಮಾಣ ಸೇನೆ ತೀವ್ರವಾಗಿ ಖಂಡಿಸುತ್ತದೆ. ಕನ್ನಡ ಬಾವುಟ ಕನ್ನಡಿಗರಿಗೆ ರಾಷ್ಟ್ರಧ್ವಜದಷ್ಟೇ ಪವಿತ್ರ. ರಾಷ್ಟ್ರಧ್ವಜದ ಮಾದರಿಯಲ್ಲೇ ಇದಕ್ಕೆ ಗೌರವ ನೀಡಬೇಕು. ಆದರೆ ಇತ್ತಿಚೀನ ದಿನಗಳಲ್ಲಿ ರಾಜಕೀಯ ಪಕ್ಷಗಳು, ಕೆಲ ಸಂಘ-ಸಂಸ್ಥೆಗಳು ಈ ಬಾವುಟವನ್ನು ತಮ್ಮ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ. ಇದು ನಿಜಕ್ಕೂ ಖಂಡನಿಯ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ಅಧ್ಯಕ್ಷ ಭೀಮಾಶಂಕರ್ ಪಾಟೀಲ್ ಹೇಳಿದ್ದಾರೆ.

    ಕಾಂಗ್ರೆಸ್ ಪಕ್ಷ ಭಾರತ ಜೋಡೋ ಯಾತ್ರೆಯ ನೆಪದಲ್ಲಿ ಕನ್ನಡಿಗರ ಅಸ್ಮಿತೆಗೆ ಧಕ್ಕೆ ತರುವಂತೆ ನಡೆದುಕೊಳ್ಳಬಾರದು. ಕನ್ನಡ ಬಾವುಟಕ್ಕಿಂತ ರಾಹುಲ್ ಗಾಂಧಿ ದೊಡ್ಡವರಲ್ಲ. ನಾಡಿನ ಅಭಿಮಾನಕ್ಕಾಗಿ ಬಾವುಟ ಬಳಸಲು ನಮ್ಮ ವಿರೋಧವಿಲ್ಲ. ಬಾವುಟದಲ್ಲಿ ಭಾವಚಿತ್ರ ಬಳಸುವುದನ್ನು ನಾವು ವಿರೋಧಿಸುತ್ತೇವೆ. ಕಾಂಗ್ರೆಸ್ ಪಕ್ಷ ಮಾಡಿರುವ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts