

ಕಾನ್ಪುರ: ಬಿಜೆಪಿ ಶಾಸಕರೊಬ್ಬರ (BJP MLA) ಆಪ್ತನ ಖಾಸಗಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜ್ಯದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ. ಉತ್ತರಪ್ರದೇಶದ ಕಾನ್ಪುರ ಭಾಗದ ಶಾಸಕರ ಆಪ್ತ ಕುಲದೀಪ್ ಸಿಂಗ್ ಭದೌರಿಯಾ ಮಹಿಳೆಯೊಂದಿಗಿರುವ ವಿಡಿಯೋ ಸದಸ್ಯ ವೈರಲ್ ಆಗಿದ್ದು, ಹಲವು ಪ್ರಶ್ನೆಗಳು ಉದ್ಭವಿಸಿವೆ.
ಉತ್ತರಪ್ರದೇಶ ಭಾಗದ ಕೇಂದ್ರ ಸಚಿವರು ಹಾಗೂ ಶಾಕಸರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕುಲ್ದೀಪ್ ಖಾಸಗಿ ವಿಡಿಯೋವನ್ನು ತನ್ನದೇ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ನೆಟ್ಟಿಗರು ಫುಲ್ ಗರಂ ಆಗಿ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.
ಇತ್ತ ಬಿಜೆಪಿ ಶಾಸಕರ ಆಪ್ತನ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಶಾಸಕರ ಆಪ್ತನು ಮೊಬೈಲ್ ಹ್ಯಾಕ್ ಮಾಡಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ. ಆದರೆ, ಕೇಳಿ ಬಂದಿರುವ ಮಾಹಿತಿ ಪ್ರಕಾರ ಶಾಸಕರ ಆಪ್ತನು ಕುಡಿದ ಅಮಲಿನಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾನೆ ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ನಡೆಸಿದ ಬಳಿಕ ಸ್ಪಷ್ಟ ಚಿತ್ರಣ ನೀಡಲಿದ್ದಾರೆ.
ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ವಿರುದ್ಧ ವಿಪಕ್ಷಗಳು ಹಾಗೂ ಸಾರ್ವಜನಿಕರು ತಿರುಗಿ ಬಿದ್ದಿದ್ದು, ಶಾಸಕರು ಆಪ್ತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇದಲ್ಲದೆ ಬಿಜೆಪಿ ಶಾಸಕನ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ವಿಡಿಯೋ ನೋಡಿದವರು ಆಗ್ರಹಿಸಿದ್ದಾರೆ.