ಸಂಸದರಿಂದ ಸೇತುವೆ ಕಾಮಗಾರಿ ವೀಕ್ಷಣೆ

bridge
ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣವಾಗುತ್ತಿರುವ ಕೇಬಲ್ ಆಧಾರಿತ ಸಿಗಂದೂರು ಸೇತುವೆ ಕಾಮಗಾರಿಯನ್ನು ಮಂಗಳವಾರ ಸಂಸದ ಬಿ. ವೈ. ರಾಘವೇಂದ್ರ ಅವರು ಅಧಿಕಾರಿಗಳೊಂದಿಗೆ ಪರಿವೀಕ್ಷಣೆ ನಡೆಸಿದರು
Published on

ಬೈಂದೂರು: ಮಲೆನಾಡಿಗರ ಶತಮಾನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಶರಾವತಿ ಹಿನ್ನೀರಿಗೆ ಅಂಬಾರಗೋಡ್ಲು-ಕಳಸವಳ್ಳಿ ನಡುವೆ 423.15 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 2.25ಕಿ.ಮೀ ಉದ್ದದ ಕೇಬಲ್ ಆಧಾರಿತ ಸಿಗಂದೂರು ಸೇತುವೆ ಕಾಮಗಾರಿಯನ್ನು ಮಂಗಳವಾರ ಸಂಸದ ಬಿ. ವೈ. ರಾಘವೇಂದ್ರ ಅಧಿಕಾರಿಗಳೊಂದಿಗೆ ಪರಿವೀಕ್ಷಣೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಮಲೆನಾಡಿಗರ ಶತಮಾನಗಳ ಕಾಯುವಿಕೆಗೆ ತೆರೆ ಬೀಳಲು ಕ್ಷಣಗಣನೆ ಆರಂಭವಾಗಿದೆ. ವಿಶ್ವದರ್ಜೆಯ ಸೇತುವೆ ನಿರ್ಮಾಣ ಮೂಲಕ ನಾಡಿಗೆ ಬೆಳಕು ನೀಡಿದವರ ಹಿತ ಕಾಯಲು ಬದ್ಧರಾಗಿದ್ದೇವೆ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲು ದೊರಕಲಿದೆ. ಇತಿಹಾಸ ಪ್ರಸಿದ್ಧ ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ದರ್ಶನಕ್ಕೆ ಅನುಕೂಲವಾಗಲಿದೆ. ತುರ್ತು ಸಂದರ್ಭಗಳಲ್ಲಿ ಗ್ರಾಮಸ್ಥರ ಭಯದ ವಾತಾವರಣ ದೂರವಾಗಲಿದೆ. ಇದು ಸಾರ್ಥಕತೆ ಮೂಡಿಸಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net