ಎನ್‌ಸಿಸಿ, ಸಮಿತಿಯವರಿಂದಲೇ ಅಡ್ಡಿ

blank

ಮೈಸೂರು: ದಸರಾದ ಅಂತಿಮ ದಿನ ನಡೆಯುವ ಆಕರ್ಷಕವಾದ ವಿಖ್ಯಾತ ಜಂಬೂಸವಾರಿ ಮೆರವಣಿ ಕಣ್ತುಂಬಿಕೊಳ್ಳಬೇಕು ಎಂದು ಬಂದವರಿಗೆ ಎನ್‌ಸಿಸಿ ಕೆಡೆಟ್‌ಗಳು ಹಾಗೂ ಮೆರವಣಿಗೆ, ಸ್ತಬ್ಧಚಿತ್ರ, ಸ್ವಚ್ಛತೆ ಸೇರಿದಂತೆ ವಿವಿಧ ಸಮಿತಿಯವರು ಅಡ್ಡಿಯಾದರು. ಮೆರವಣಿಗೆಯನ್ನು ಹತ್ತಿರದಿಂದ ನೋಡಬೇಕು ಎಂದು ಬಂದು ಬಿಸಿಲು, ಮಳೆಯಲ್ಲಿಯೂ ಜನರು ಕಾಯ್ದಿದ್ದರು. ಆದರೆ ಮೆರವಣಿಗೆ ಆರಂಭಗೊಳ್ಳುತ್ತಿದ್ದಂತೆಯೇ ಮಳೆ ಸುರಿದಿದ್ದು, ಕೊಂಚ ನಿರಾಸೆ ತರಿಸಿತು. ಮೆರವಣಿಗೆ ಸಾಗುವ ದಾರಿಯಲ್ಲಿ ಜನರಿಗೆ ಅಡ್ಡಲಾಗಿ ಅಗತ್ಯಕ್ಕಿಂತ ಹೆಚ್ಚಿನ ಎನ್‌ಸಿಸಿ ಕೆಡೆಟ್‌ಗಳು, ಮೆರವಣಿಗೆ, ಸ್ತಬ್ಧಚಿತ್ರ, ಸ್ವಚ್ಛತೆ ಸೇರಿದಂತೆ ನಾನಾ ಸಮಿತಿ ಸದಸ್ಯರು, ರಾಜಕೀಯ ಪುಡಾರಿಗಳು ನಿಂತಿದ್ದರು. ಅಲ್ಲದೇ ಕೆಲವರು ಮುಂದೆ ಹೋಗಿ ತಮ್ಮ ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಂಡರೆ, ಛಾಯಾಗ್ರಾಹಕರು ಎಂದು ಟ್ಯಾಗ್ ಹಾಕಿಕೊಂಡು ಅತ್ತಿಂದ ಇತ್ತ, ಇತ್ತಿಂದ ಅತ್ತ ಓಡಾಡುವವರ ಸಂಖ್ಯೆಗೂ ಕಡಿಮೆ ಇರಲಿಲ್ಲ. ಹೀಗಾಗಿ ಜಂಬೂಸವಾರಿ ಮೆರವಣಿಗೆ ನೋಡಲು ಬಂದವರು ಬೇಸರ ವ್ಯಕ್ತಪಡಿಸಿದರು.

Share This Article

Skin Care | ಚಳಿಗಾಲದಲ್ಲಿ ನಿಮ್ಮ ತ್ವಚೆಯು ಹಾಳಾಗದಂತೆ ಎಚ್ಚರವಹಿಸಿ; ಈ ಫೇಸ್​ಪ್ಯಾಕ್ ಟ್ರೈ ಮಾಡಿ ಫಲಿತಾಂಶ ನೀವೇ ನೋಡಿ..

ಚಳಿಗಾಲ ಆರಂಭವಾಯಿತು ಎಂದರೆ ಸಾಕು ತ್ವಚೆಯಲ್ಲಿ ಸಣ್ಣದಾಗಿ ಬಿರುಕು ಕಾಣಿಸಿಕೊಳ್ಳುವುದನ್ನು ನಾವು ನೊಡಬಹುದು. ಇನ್ನು ಮುಖದ…

ಈ ಆಹಾರ ಪದಾರ್ಥದಲ್ಲಿದೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿ; Health Tips ನಿಮಗಾಗಿ

ಕ್ಯಾನ್ಸರ್​​ನಂತಹ ಗಂಭೀರ ಕಾಯಿಲೆಯನ್ನು ತಡೆಗಟ್ಟಲು ಆರೋಗ್ಯಕರ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.…

ಚಳಿಗಾಲದಲ್ಲಿ ಕೈ&ಕಾಲ್ಬೆರಳುಗಳ ಊತಕ್ಕೆ ಕಾರಣ ಈ ಕಾಯಿಲೆ; ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ… | Health Tips

ಚಳಿಗಾಲದಲ್ಲಿ ನೆಗಡಿ ಮಾತ್ರವಲ್ಲದೆ ಹಲವಾರು ಕಾಯಿಲೆಗಳು ಸಮಸ್ಯೆಯನ್ನು ಹೆಚ್ಚಿಸುತ್ತವೆ. ಅದರಲ್ಲಿ ಚಿಲ್ಬ್ಲೈನ್ಸ್ ರೋಗವು ಒಂದಾಗಿದೆ. ಬಹುಶಃ…