ಒಡಿಶಾ ರೈಲು ಅಪಘಾತ ಪ್ರಕರಣ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಪೊಲೀಸರು; ಯಾರಿಗೆ, ಯಾಕೆ?

Odisha Police
Published on

ಒಡಿಶಾ: ಇಲ್ಲಿನ ಬಾಲಸೋರ್​ನಲ್ಲಿ ಶುಕ್ರವಾರ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಒಡಿಶಾ ಪೊಲೀಸರು ಕಠಿಣ ಕ್ರಮದ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಈ ಮೂಲಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನವನ್ನೂ ಮಟ್ಟಹಾಕಲು ಮುಂದಾಗಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿನ ಪೋಸ್ಟ್​ಗಳ ಹಿನ್ನೆಲೆಯಲ್ಲಿ ಒಡಿಶಾ ಪೊಲೀಸರು ಈ ಎಚ್ಚರಿಕೆ ನೀಡಿದ್ದು, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದ್ದಾರೆ. ಅಂದಹಾಗೆ ಕೆಲವರು ಈ ಅಪಘಾತಕ್ಕೆ 'ಕೋಮು' ಬಣ್ಣ ಬಳಿಯಲು ಮುಂದಾಗಿದ್ದೇ ಪೊಲೀಸರು ಇಂಥದ್ದೊಂದು ಎಚ್ಚರಿಕೆ ನೀಡಲು ಕಾರಣ.

ಬಾಲಸೋರ್​​ನಲ್ಲಿ ಸಂಭವಿಸಿದ ದುರಂತ ರೈಲು ಅಪಘಾತಕ್ಕೆ ಕೆಲವು ಸಾಮಾಜಿಕ ಮಾಧ್ಯಮ ಹ್ಯಾಂಡಲ್​​ಗಳು ಕಿಡಿಗೇಡಿತನದಿಂದ ಕೋಮು ಬಣ್ಣ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ದುರದೃಷ್ಟಕರ. ಅಪಘಾತದ ಕಾರಣ ಮತ್ತು ಇತರ ಎಲ್ಲಾ ಅಂಶಗಳ ಬಗ್ಗೆ ಒಡಿಶಾದ ಜಿಆರ್​ಪಿ ತನಿಖೆ ನಡೆಯುತ್ತಿದೆ. ಇಂತಹ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್​​ಗಳನ್ನು ಪ್ರಸಾರ ಮಾಡದಂತೆ ನಾವು ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡುತ್ತೇವೆ. ವದಂತಿಗಳನ್ನು ಹರಡುವ ಮೂಲಕ ಕೋಮುಸಾಮರಸ್ಯ ಕದಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಒಡಿಶಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net