ಮಂಡೆಕೋಲು ಸಹಕಾರಿ ಸಂಘಕ್ಕೆ ಒಡಿಯೂರು ಶ್ರೀ ಭೇಟಿ

Sul_Odiyuru
Published on

ಸುಳ್ಯ: ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಒಡಿಯೂರು ಗುರುದೇವಾನಂದ ಸ್ವಾಮೀಜಿ ಇತ್ತೀಚೆಗೆ ಭೇಟಿ ನೀಡಿದರು.

ಒಡಿಯೂರು ಗ್ರಾಮ ವಿಕಾಸ ಯೋಜನೆಯ ಮಂಡೆಕೋಲು ಸಮಿತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಒಡಿಯೂರು ಶ್ರೀಗಳು ಕಾರ್ಯಕ್ರಮ ಮುಗಿಸಿ ಬಳಿಕ ಸಹಕಾರ ಸಂಘಕ್ಕೆ ಭೇಟಿ ನೀಡಿದರು.

ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಮುಖ್ಯಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್, ಸಹಕಾರ ಸಂಘದ ನಿರ್ದೇಶಕರು, ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net