More

    ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ವ್ಯವಸ್ಥಿತವಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಿ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚಿಸಿದರು.

    ಡಿಸಿ ಕಚೆೇರಿ ಸಭಾಂಗಣದಲ್ಲಿ ಶನಿವಾರ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಂಬಂಧಿಸಿ ಜಿಲ್ಲಾ ಹಂತದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತಾಗಿನ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಎಸ್​ಎಸ್​ಎಲ್​ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಯಲು ಶಿಕ್ಷಣ, ಆರೋಗ್ಯ, ಪೊಲೀಸ್ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಶೌಚಗೃಹ ಸೋಂಕು ಹರಡುವ ಕೇಂದ್ರಗಳಲ್ಲಿ ಒಂದಾಗಿರುವುದರಿಂದ ಇದನ್ನು ಶುಚಿಯಾಗಿಟ್ಟುಕೊಳ್ಳಲು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಬೆಳಗ್ಗೆ 6 ಗಂಟೆ ಸುಮಾರಿಗೆ ಮನೆ ಬಿಡುವುದರಿಂದ ಅಗತ್ಯವಿದ್ದಲ್ಲಿ ತಿಂಡಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಕರೊನಾ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳ ಆರೋಗ್ಯದ ಕಡೆ ನಿಗಾವಹಿಸಬೇಕು. ಥರ್ಮಲ್ ಸ್ಕ್ರೀನಿಂಗ್ ಮೂಲಕ ತಪಾಸಣೆ ನಡೆಸಿ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸಲು ತಿಳಿಸಬೇಕು. ಕುಡಿಯಲು ಬಿಸಿ ನೀರು ವ್ಯವಸ್ಥೆ ಕಲ್ಪಿಸಬೇಕು. ಜ್ವರದ ಲಕ್ಷಣ ಕಂಡುಬಂದ ಮಕ್ಕಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts