ನಿಯಮ ಅನುಷ್ಠಾನ ವಿಳಂಬವಾದ್ರೆ ಕ್ರಮ

ಯಾದಗಿರಿ: ರಸ್ತೆ ಸುರಕ್ಷತಾ ನಿಯಮ ಅನುಷ್ಠಾನಗೊಳಿಸುವಲ್ಲಿ ಸಂಬಂಧಿತ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಎಚ್ಚರಿಕೆ ನೀಡಿದ್ದಾರೆ.

ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕು ಸಾಗಣೆ ವಾಹನಗಳಲ್ಲಿ ಶಾಲೆ ಮಕ್ಕಳು, ಕೂಲಿ ಕಾರ್ಮಿ ಕರು ಸೇರಿ ಇತರ ಪ್ರಯಾಣಿಕರನ್ನು ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಸುರಕ್ಷಿತವಲ್ಲದಂತೆ ಕಾಯರ್ಾಚರಣೆ ಮಾಡುತ್ತಿರುವ ಬಗ್ಗೆ ಹೈಕೋರ್ಟ್​ನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರಿಟ್ ಅರ್ಜಿ ದಾಖಲಿಸಿದೆ. ಇಂತಹ ಪ್ರಕರಣ ತಡೆಗಟ್ಟಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಇತ್ತೀಚೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿದ್ದಾರೆ ಎಂದರು.

ಈಗಾಗಲೇ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ತಂಡದಿಂದ ವೈಜ್ಞಾನಿಕವಾಗಿ ತನಿಖೆ ಕೈಗೊಂಡು ಜಿಲ್ಲೆಯ ಒಂದೇ ಸ್ಥಳದಲ್ಲಿ ಪದೇಪದೆ ಅಪಘಾತ ಸಂಭವಿಸುವಂತಹ 65 ಅಪಘಾತ ವಲಯ (ಬ್ಲ್ಯಾಕ್ಸ್ಪಾಟ್)ಗಳನ್ನು ಗುರುತಿಸಲಾಗಿದೆ. ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಗಳಿಂದ ಜಂಟಿ ಸಮೀಕ್ಷೆ ಕೈಗೊಂಡು ಬ್ಲ್ಯಾಕ್ಸ್ಪಾಟ್ಗಳ ವರದಿ ಸಿದ್ಧಪಡಿಸಲಾಗಿದೆ. ಇಂಥ ಸ್ಥಳಗಳಲ್ಲಿ ಅಪಘಾತ ತಡೆಗಟ್ಟಲು ಸೂಚನಾ ಫಲಕ, ಸ್ಪೀಡ್ ಬ್ರೇಕರ್, ಜಂಗಲ್ ಕಟಿಂಗ್, ಝಿಬ್ರಾ ಕ್ರಾಸಿಂಗ್, ರಸ್ತೆಯನ್ನು ನೇರವಾಗಿ ಸರಿಪಡಿಸುವುದು, ರಸ್ತೆ ವಿಸ್ತರಣೆ ಸೇರಿ ಇತರ ಪರಿಹಾರ ಅಂಶಗಳನ್ನು ವರದಿಯಲ್ಲಿ ನೀಡಲಾಗಿದೆ. ಅದರಂತೆ ಪರಿಹಾರ ಕಾರ್ಯಕ್ಕಾಗಿ ಈ ತಿಂಗಳ ಅಂತ್ಯದೊಳಗೆ ಅಂದಾಜು ವೆಚ್ಚದ ಪಟ್ಟಿ ಸಿದ್ಧಪಡಿಸುವಂತೆ ಲೋಕೋಪಯೋಗಿ ಇಲಾಖೆ ಕಾರ್ಯನಿವರ್ಾಹಕ ಇಂಜಿನಿಯರ್ ಚನ್ನಬಸಪ್ಪ ಮೇಕಾಲೆ ಅವರಿಗೆ ಸೂಚಿಸಿದರು.

2018-19ನೇ ಸಾಲಿಗೆ ಸಾರಿಗೆ ಕ್ಷೇಮಾಭಿವೃದ್ಧಿ ಮತ್ತು ರಸ್ತೆ ಸುರಕ್ಷತಾ ಯೋಜನೆಯಡಿ ಜಿಲ್ಲೆಗೆ 5.33 ಲಕ್ಷ ರೂ. ಬಿಡುಗಡೆಯಾಗಿದೆ. ಈ ಹಣವನ್ನು ಬ್ಲ್ಯಾಕ್ಸ್ಪಾಟ್ ಸರಿಪಡಿಸುವಿಕೆಗೆ ಬಳಸಲು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಚವ್ಹಾಣ್ ಅವರಿಗೆ ಹೇಳಿದರು.

ಜಿಲ್ಲೆಯಲ್ಲಿ ಆಟೋ ರಿಕ್ಷಾ, ಕ್ಯಾಬ್ಗಳಲ್ಲಿ ಆಸನ ಸಾಮಥ್ರ್ಯಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಬಗ್ಗೆ ದೂರು ಕೇಳಿಬಂದಿವೆ. ಇದನ್ನು ತಡೆಗಟ್ಟಲು ಜಿಲ್ಲೆಯ ಸಕರ್ಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ರಸ್ತೆ ಸುರಕ್ಷತಾ ಅಧಿಕಾರಿಗಳನ್ನಾಗಿ ನೇಮಕ ಮಾಡಬೇಕು. ವಾಹನಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆತಂದಾಗ ಸಂಬಂಧಪಟ್ಟ ವಾಹನ ಚಾಲಕರು, ಮಾಲೀಕರಿಗೆ ಎಚ್ಚರಿಕೆ ನೀಡಬೇಕು. ಸುರಕ್ಷತಾ ಅಧಿಕಾರಿ ನೇಮಕದ ಬಗ್ಗೆ ಶಿಕ್ಷಣ ಇಲಾಖೆಯಿಂದ ಕ್ರಮ ವಹಿಸುವಂತೆ ಡಿಡಿಪಿಐ ಶ್ರೀಶೈಲ್ ಬಿರಾದಾರ ಅವರಿಗೆ ನಿರ್ದೇ ಶನ ನೀಡಿದರು.

ಸಿಪಿಐ ನಾಗರಾಜ ಮಾತನಾಡಿ, ಯುವಕರು ಹೆಚ್ಚಾಗಿ ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುತ್ತಾರೆ. ಹೆಲ್ಮೆಟ್ ಹಾಕಿಕೊಳ್ಳುವುದಿಲ್ಲ ಮತ್ತು ಬೈಕ್ನಲ್ಲಿ ಮೂವರು ಸವಾರಿ ಮಾಡುವಂತಹ ಪ್ರಕರಣ ಕಂಡುಬರುತ್ತಿವೆ. ಹೀಗಾಗಿ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿಗಾಗಿ ತಿಂಗಳಿಗೆ ಒಂದು ಕ್ಲಾಸ್ ನಡೆಸಬೇಕು ಎಂದು ಕೋರಿದರು. ಇದಕ್ಕೆ ಸಮ್ಮತಿ ನೀಡಿದ ಡಿಸಿ, ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಮಾತನಾಡಿ, ರಸ್ತೆ ಸುರಕ್ಷತಾ ವಿಷಯವನ್ನು ಸಕರ್ಾರದ ಮಟ್ಟದಲ್ಲಿ ಗಂಭೀರವಾಗಿ ಪರಿಗಣಿಸಲಾಗಿದೆ. ಸರಕು ಸಾಗಣೆ ವಾಹನಗಳಲ್ಲಿ ಮಕ್ಕಳು, ಕೂಲಿ ಕಾಮರ್ಿಕರು ಇತರ ಪ್ರಯಾಣಿಕರನ್ನು ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಕಾಯರ್ಾಚರಣೆ ಮಾಡುತ್ತಿರುವುದು ಕಂಡುಬಂದಲ್ಲಿ ಕೇಸ್ ದಾಖಲಿಸಬೇಕು ಎಂದು ಅಧೀನದ ಅಧಿಕಾರಿಗಳಿಗೆ ನಿದರ್ೇಶಿಸಿದರು.

ಜಿಪಂ ಸಿಇಒ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಡಿವೈಎಸ್ಪಿಗಳಾದ ಯು.ಶರಣಪ್ಪ, ಶಿವನಗೌಡ ಪಾಟೀಲ್, ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ, ಪೌರಾಯುಕ್ತ ರಮೇಶ ಸುಣಗಾರ ಇತರರಿದ್ದರು.