More

    ಸೌಲಭ್ಯ ನೀಡಲು ಅರ್ಜಿ ಕರೆಯಿರಿ

    ಯಾದಗಿರಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಗಳ ಅನುದಾನ ಬಿಡುಗಡೆಯಾಗಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲಾಗುವುದು ಎಂದು ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಬೆಸ್ತ, ಕೋಳಿ, ಕಬ್ಬಲಿಗ, ಮೊಗವೀರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನದ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಗಮದ ಅನುದಾನ ತಲುಪುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

    ಕರೊನಾ ವೈರಸ್ ನಿಮರ್ೂಲನೆಗೆ ಇಲ್ಲಿಯವರೆಗೆ ಔಷಧಿ ಕಂಡುಹಿಡಿದಿಲ್ಲ. ಪ್ರಧಾನಮಂತ್ರಿಗಳ ಸೂಚನೆಯಂತೆ ಪರಸ್ಪರ ಅಂತರ ಪಾಲನೆ ಮಾಡುವುದು, ಮಾಸ್ಕ್ ಧರಿಸುವುದು ಮತ್ತು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವುದೊಂದೇ ಪರಿಹಾರವಾಗಿದೆ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಎಸ್.ಪಿ.ಋಷಿಕೇಶ್ ಭಗವಾನ್ ಸೋನವಾಣೆ, ನಿಗಮದ ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts