More

    ಅಧಿಕಾರಿಗಳ ಕಿರುಕುಳ ತಪ್ಪಿಸಿ

    ಬೆಳಗಾವಿ: ಕೋವಿಡ್-19ನಿಂದಾಗಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು ಆರ್ಥಿಕ ಸಂಕಷ್ಟದಲ್ಲಿದ್ದು, ಇಂತಹ ಸಂದರ್ಭದಲ್ಲಿ ಆರ್‌ಟಿಒ ಮತ್ತು ಪೊಲೀಸ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಟ್ಯಾಕ್ಸಿ ಮಾಲೀಕರ ಸಂಘಟನೆ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

    ಟ್ಯಾಕ್ಸಿ ಚಾಲನೆಯಿಂದ ಬರುವ ಆದಾಯದ ಮೇಲೆ ಕುಟುಂಬ ಸಾಗಿಸುತ್ತಿದ್ದ ಮಾಲೀಕರು ಮತ್ತು ಚಾಲಕರು ಇದೀಗ ಆದಾಯವಿಲ್ಲದೆ ತೊಂದರೆಯಲ್ಲಿದ್ದಾರೆ. ಬ್ಯಾಂಕ್‌ಗಳಲ್ಲಿ ಮಾಡಿರುವ ವಾಹನ ಸಾಲ ಮರುಪಾವತಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಆರ್‌ಟಿಒ ಮತ್ತು ಪೊಲೀಸರು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು.

    ಲಾಕ್‌ಡೌನ್ ಪೂರ್ವದಲ್ಲಿ ನೆರೆಯ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯದ ವಿವಿಧ ಪ್ರವಾಸಿ ತಾಣಗಳಿಗೆ ಜಿಲ್ಲೆಯ ವಿವಿಧ ಭಾಗಗಳಿಂದ ಜನರನ್ನು ಮತ್ತು ಬೇರೆ ರಾಜ್ಯಗಳ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದೆವು. ಆದರೆ, ಇದೀಗ ಯಾವುದೇ ರೀತಿ ಬಾಡಿಗೆ ಬರುತ್ತಿಲ್ಲ. ಹಾಗಾಗಿ ಸರ್ಕಾರವು ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರಿಗೆ ಆರ್ಥಿಕ ಸಹಾಯ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾವು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಚಾಲಕರು ಅಸಹಾಯಕತೆ ವ್ಯಕ್ತಪಡಿಸಿದರು. ಮಲ್ಲಿಕಾರ್ಜುನ ಪಿ., ನಜೀರ್ ಸುರಕೋಡ, ಎನ್.ಚಂದ್ರಕಾಂತ, ಮನೋಜ ನಾಯಕ್, ಗುರು ಎಸ್., ಶೇಖರ್ ಎಸ್. ಸೇರಿದಂತೆ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts