21.7 C
Bengaluru
Tuesday, January 21, 2020

ರೇವಣ್ಣ ಎಲ್ಲೆಡೆ ಮೂಗು ತೂರಿಸ್ತಾರೆ, ಡಿಸಿಎಂ ಸುಮ್ಮನಿರ್ತಾರೆ!

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರ ಸರ್ಕಾರದ ಪಾಲುದಾರ ಪಕ್ಷದಲ್ಲಿ ಅಸಮಾಧಾನ ಹುಟ್ಟುಹಾಕಿದೆ.

ನಮ್ಮ ಇಲಾಖೆ ಅಧಿಕಾರಿಗಳ ವರ್ಗಾವಣೆಯಲ್ಲಿ ಮೂಗು ತೂರಿಸಲಾಗುತ್ತಿದೆ ಎಂಬ ಬೇಸರ ಕಾಂಗ್ರೆಸ್ ಸಚಿವರನ್ನು ಆವರಿಸಿದ್ದು, ಪಕ್ಷದ ನಾಯಕರ ಸಮ್ಮುಖ ಚರ್ಚೆಗಳು ನಡೆದಿವೆ. ಬುಧವಾರ ರಾತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಔತಣಕೂಟದಲ್ಲಿ ಸಹ ವರ್ಗಾವಣೆ ವಿಚಾರವೇ ಪ್ರಮುಖವಾಗಿ ಪ್ರಸ್ತಾಪವಾಗಿದೆ.

ಔತಣಕೂಟ ಆರಂಭದಲ್ಲೇ ಮೈತ್ರಿ ಸರ್ಕಾರ, ಸಿಎಂ ಆಡಳಿತದ ತೀರ್ವನದ ಬಗ್ಗೆ ಸಚಿವರೊಡನೆ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡರು. ಜೆಡಿಎಸ್ ಸಚಿವರ ಹೇಳಿಕೆಗಳು, ನಿರ್ಧಾರಗಳ ಕುರಿತು ವರ್ಣರಂಜಿತ ಚರ್ಚೆ ನಡೆದಿದೆ. ವರ್ಗಾವಣೆ ವಿಚಾರದಲ್ಲಿ ಎಚ್.ಡಿ ರೇವಣ್ಣ ಅವರಿಗೆ ನೀವೇ ಹೇಳಿ ಎಂದು ಸಿದ್ದರಾಮಯ್ಯ ಬಳಿ ಕೆಲವು ಸಚಿವರು ಒತ್ತಾಯಿಸಿದರೆಂದು ತಿಳಿದುಬಂದಿದೆ.

ರೇವಣ್ಣ ಎಲ್ಲ ಇಲಾಖಾ ಅಧಿಕಾರಿಗಳ ವರ್ಗಾವಣೆಯಲ್ಲಿ ಮೂಗು ತೂರಿಸ್ತಾರೆ, ನಮ್ಮ ಡಿಸಿಎಂ ಪರಮೇಶ್ವರ್ ಸುಮ್ಮನಿರ್ತಾರೆ ಎಂದು ಹಿರಿಯ ಸಚಿವರೊಬ್ಬರು ಹಾಸ್ಯಭರಿತರಾಗಿ ವಿಷಯ ಪ್ರಸ್ತಾಪಿಸಿದ್ದಾರೆ. 120 ಸಬ್ ರಿಜಿಸ್ಟ್ರಾರ್ ವರ್ಗಾವಣೆಯಲ್ಲೂ ರೇವಣ್ಣ ಪಾತ್ರವಿದೆ ಎಂಬ ಮಾತೂ ಸಭೆಯಲ್ಲಿ ಕೇಳಿಬಂದಿದೆ. ಎಲ್ಲರ ಅಭಿಪ್ರಾಯ ಪಡೆದ ನಂತರ, ಈ ವಿಚಾರವನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪ ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಲೋಕಸಭಾ ಕ್ಷೇತ್ರಗಳ ಹಂಚಿಕೆ ತಿಕ್ಕಾಟ, ಇಂದು ಕಾಂಗ್ರೆಸ್ ಸಭೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್, ಕ್ಷೇತ್ರಗಳ ವಸ್ತುಸ್ಥಿತಿ ಅರಿಯುವ ಕೆಲಸವನ್ನು ಶುಕ್ರವಾರದಿಂದ ಆರಂಭಿಸುತ್ತಿದೆ. ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಡಿಸಿಎಂ ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಪಾಲ್ಗೊಳ್ಳುವರು.

ಶುಕ್ರವಾರ ಉಡುಪಿ- ಚಿಕ್ಕಮಗ ಳೂರು, ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ಮಂಡ್ಯ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಪ್ರಮುಖರೊಂದಿಗೆ ಪ್ರತ್ಯೇಕವಾಗಿ ಒಂದೊಂದು ತಾಸು ಸಭೆ ನಡೆಯಲಿದೆ. ಶನಿವಾರ ಮತ್ತು ಭಾನುವಾರ (ಆ.4 ಮತ್ತು 5) ನಡೆಯಬೇಕಿದ್ದ ಉಳಿದ ಜಿಲ್ಲೆಗಳ ಅವಲೋಕನ ಸಭೆಯನ್ನು ಎಐಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಕೆ.ಸಿ.ವೇಣುಗೋಪಾಲ್ ಪಾಲ್ಗೊಳ್ಳುವ ಕಾರಣ ಒಂದು ವಾರದ ಬಳಿಕ ನಡೆಸಲು ಉದ್ದೇಶಿಸಲಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಲೋಕಸಭೆ ಕ್ಷೇತ್ರದ ಪರಿಸ್ಥಿತಿ, ವಿಧಾನಸಭೆ ಚುನಾವಣೆ ಸಾಧನೆ, ಲೋಪಗಳು, ಆಕಾಂಕ್ಷಿಗಳು, ಜೆಡಿಎಸ್​ಗೆ ಬಿಟ್ಟುಕೊಡುವ ಕ್ಷೇತ್ರವಾದರೆ ಏನು ಮಾಡಬೇಕು? ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲು ದೆಹಲಿ ನಾಯಕರು ಅತಿ ಆಸಕ್ತಿ ವಹಿಸಿರುವ ಕಾರಣ ರಾಜ್ಯ ನಾಯಕರು ಒಲ್ಲದ ಮನಸ್ಸಿನಿಂದಲೇ ಅನಿವಾರ್ಯ ಸಂದರ್ಭದಲ್ಲಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸುತ್ತಿದ್ದಾರೆ.

ಹೈಕಮಾಂಡ್ ಸೂಚನೆಯಂತೆಯೇ ಚುನಾವಣೆ ಮೈತ್ರಿ ಬಗ್ಗೆ ವಿವಿಧ ಸಭೆ ಕಾರ್ಯಕ್ರಮಗಳಲ್ಲಿ ನಿಲುವು ಸ್ಪಷ್ಟಪಡಿಸುತ್ತಿರುವ ರಾಜ್ಯ ಕೈ ನಾಯಕರು, ಇದೀಗ ಚುನಾವಣಾಪೂರ್ವ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪ್ರಸ್ತುತ ಜೆಡಿಎಸ್ ತೆಕ್ಕೆಯಲ್ಲಿರುವ ಹಾಸನ, ಮಂಡ್ಯ ಕ್ಷೇತ್ರವನ್ನು ಅನಿವಾರ್ಯವಾಗಿ ಬಿಟ್ಟುಕೊಡಬೇಕಾಗಿರುವುದರಿಂದ ಆ ಕ್ಷೇತ್ರದ ಸ್ಥಳೀಯ ನಾಯಕರನ್ನು ಹೇಗೆ ಮನವರಿಕೆ ಮಾಡಿಕೊಡಬೇಕೆಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...