ಹುಬ್ಬಳ್ಳಿ: ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮೀಕಾಂತ ರೆಡ್ಡಿ ಅವರು ಬುಧವಾರ ನಗರಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.
ಮಹಾನಗರದಲ್ಲಿ ಕುಸ್ಸೆಂಪ್ ಯೋಜನೆಯ ಕುಡಿಯುವ ನೀರು ಸರಬರಾಜು ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದರು.
ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಮತ್ತು ಯೋಜನಾ ಅನುಷ್ಠಾನದ ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕಾರ್ಯಗಳ ಕುರಿತು ಚಚಿರ್ಸಿದರು.
ಜಿಲ್ಲಾ ಪಂಚಾಯತ್ ಸಭಾಭವನಕ್ಕೆ ತೆರಳಿದ ಅವರು ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದರು.
ಧಾರವಾಡ ವ್ಯಾಪ್ತಿಯ ಕುಸ್ಸೆಂಪ್ ಯೋಜನೆಯ ಕುಡಿಯುವ ನೀರಿನ ಸರಬರಾಜು ಕಾಮಗಾರಿ ವೀಸಿದರು. ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಂಪೋಸ್ಟ್ ಪ್ಲಾಂಟ್ ಕಾರ್ಯ ವೈಖರಿ ಪರಿಶೀಲಿಸಿದರು.
ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಇ. ತಿಮ್ಮಪ್ಪ, ಉಪ ಆಯುಕ್ತ ಮಲ್ಲಿಕಾರ್ಜುನ ಇ.ಇ., ಯುವರಾಜ್, ಫರಿದಾ, ಶ್ರೀಧರ ಇತರರು ಸ್ಥಳದಲ್ಲಿದ್ದರು.