ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಂದ ಕಂದಾಯ ಅಧಿಕಾರಿಗಳಿಗೆ ಖಡಕ್‌ ವಾರ್ನಿಂಗ್‌

ಹಾಸನ: ವರ್ಗಾವಣೆ ಕುರಿತಂತೆ ಸಾಕಷ್ಟು ಹಗ್ಗಜಗ್ಗಾಟಗಳ ಮಧ್ಯೆ ಮರಳಿ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕೆಳ ಹಂತದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ತಾಲೂಕು ಕಚೇರಿಯಲ್ಲಿ ನಡೆದ ಸಾರ್ವಜನಿಕ ದೂರು ಕಾರ್ಯಕ್ರಮದಲ್ಲಿ ಕೆಲಸ ಮಾಡದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದು, ಕಂದಾಯ ಇಲಾಖೆ ಅಧಿಕಾರಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಈ ವೇಳೆ ಸ್ಥಳದಲ್ಲೇ ತೋಟಗಾರಿಕೆ ಇಲಾಖೆ ಅಧಿಕಾರಿ, ಕಂದಾಯ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು. 4 ವರ್ಷದಿಂದ ಏಕೆ ಖಾತೆ ಮಾಡಿಕೊಟ್ಟಿಲ್ಲ. ಅದೆಲ್ಲ ನನಗೆ ಗೊತ್ತಿಲ್ಲ, ಕೆಲಸ ಆಗಬೇಕು ಅಷ್ಟೆ. ಬೇರೆಯವರ ಮೇಲೆ ನಿಮ್ಮ ಜವಾಬ್ದಾರಿ ಹೊರಿಸ್ಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗ್ಗೆ ಮೀಡಿಯಾ, ಜನ ಇದ್ದರು ಎಂದು ಏನು ಮಾತನಾಡಿಲ್ಲ. ಇನ್ಮುಂದೆ ಹೀಗಾದ್ರೆ ನಡೆಯಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಪರಿಣಾಮ ಬೇರೆಯಾಗುತ್ತದೆ ಎಂದು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. (ದಿಗ್ವಿಜಯ ನ್ಯೂಸ್‌)