More

    ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಸದ್ಯದಲ್ಲೇ ಅಧಿಕೃತ ಘೋಷಣೆ, ನಾಳೆ ಪ್ರಮಾಣ ವಚನ

    ಬೆಂಗಳೂರು: ಕಾಂಗ್ರೆಸ್​ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆಬೀಳುವ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ರೇಸ್​ನಲ್ಲಿ ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಜಯವಾಗಿದೆ ಎನ್ನಲಾಗಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.

    ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಸಿಎಂ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸ ಫಲ ನೀಡಿದ್ದು, ಸಂಜೆ ಒಳಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಬರಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

    ಇದನ್ನೂ ಓದಿ: ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಸಿದ್ದರಾಮಯ್ಯನವರ ಅಸಹಾಯಕತೆ ಕೆಲವರನ್ನು ಪಕ್ಷ ಬಿಡಲು ಪ್ರೋತ್ಸಾಹಿಸಿತ್ತು: ಎಸ್​​.ಟಿ ಸೋಮಶೇಖರ್

    ಸಿದ್ದು ನಿವಾಸದಲ್ಲಿ ಬಿಗಿಭದ್ರತೆ

    ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೆ ಅವರ ನಿವಾಸದ ಬಳಿ ಪೊಲೀಸರು ಬ್ಯಾರಿಕೇಡ್ ಅಳವಡಿಸುತ್ತಿದ್ದಾರೆ. ಹೆಚ್ಚಿನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನಿವಾಸದ ಬಳಿ ಸೇರುತ್ತಿರುವ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರಿಂದ ಹೆಚ್ಚಿನ ಭದ್ರತೆ ನಿಯೋಜಿಸಲಾಗುತ್ತಿದೆ. ಇನ್ಸ್​ಪೆಕ್ಟರ್​ ಶಿವಸ್ವಾಮಿ ನೇತೃತ್ವದಲ್ಲಿ ಭದ್ರತೆ ಏರ್ಪಡಿಸಲಾಗಿದೆ.

    ಮೇ 13 ರಂದು ಚುನಾವಣಾ ಫಲಿತಾಂಶ ಹೊರಬಿದ್ದಾಗಿನಿಂದ ಕಾಂಗ್ರೆಸ್​ ಪಾಳಯದಲ್ಲಿ ಸಿಎಂ ಸ್ಥಾನಕ್ಕಾಗಿ ಭಾರೀ ಪೈಪೋಟಿ ಆರಂಭವಾಗಿತ್ತು. ಅದರಲ್ಲೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಜಿ. ಪರಮೇಶ್ವರ್​ ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದರು. ಅಲ್ಲದೆ, ಲಿಂಗಾಯತ ಸಮುದಾಯದಿಂದಲೂ ಬೇಡಿಕೆ ಬಂದಿತ್ತು. ಸಿಎಂ ಸ್ಥಾನಕ್ಕಾಗಿ ನಾಲ್ಕೈದು ದಿನಗಳಿಂದ ನಡೆದ ಪೈಪೋಟಿಗೆ ಇಂದು ತೆರೆಬಿದ್ದಿದ್ದು, ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಕಾಂಗ್ರೆಸ್​ ಹೈಕಮಾಂಡ್​ ಅಧಿಕೃತಗೊಳಿಸಿದೆ.

    ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ!: ಸ್ಫೋಟಕ ಹೇಳಿಕೆ ನೀಡಿದ ಸುಧಾಕರ್

    ಡಿಕೆಶಿಗೆ ಭರವಸೆ

    ಇಂದು ದೆಹಲಿಯ ಜನ್​ಪತ್​ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್​ ಗಾಂಧಿ ಜತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರು ಮಾತುಕತೆ ನಡೆಸಿದರು. ಈ ವೇಳೆ ಸೋನಿಯಾ ಗಾಂಧಿ ಅವರು ಕೂಡ ದೂರವಾಣಿ ಮೂಲಕ ಡಿಕೆಶಿ ಅವರ ಜೊತೆ ಮಾತನಾಡಿ 2 ವರ್ಷದ ಬಳಿಕ ಅಧಿಕಾರ ಹಸ್ತಾಂತರ ಮಾಡಿ ಮುಖ್ಯಮಂತ್ರಿ ಸ್ಥಾನ ಕೊಡಿಸುವುದಾಗಿ ಮತ್ತು ಡಿಸಿಎಂ ಸ್ಥಾನದ ಜೊತೆಗೆ ಅವರು ಕೇಳುವ ಖಾತೆಗಳನ್ನೇ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

    ಅಮಿತ್ ಷಾ ಹೇಳಿದ ಮಾತೇ ಮುಳುವಾಯ್ತಾ..?; ಪರೋಕ್ಷವಾಗಿ ಕಿಡಿಕಾರಿದ ವಿ.ಸೋಮಣ್ಣ

    ನಾವು ಬಿಲ್ ಕಟ್ಟಲ್ಲ ಎಂದ ಗ್ರಾಮಸ್ಥರು; ಕೆಇಬಿ ಕಲೆಕ್ಟರ್​ ಊರಿಂದ ಹೊರಕ್ಕೆ!

    ಪತ್ನಿಯ ಪ್ರಾಣ ಉಳಿಸಿಕೊಳ್ಳಲು ಪರದಾಡಿದ ಪತಿ! ಕೊನೇ ಕ್ಷಣದಲ್ಲಿ ದೇವರ ರೂಪದಲ್ಲಿ ಬಂದ ಪೊಲೀಸರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts