ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಸದ್ಯದಲ್ಲೇ ಅಧಿಕೃತ ಘೋಷಣೆ, ನಾಳೆ ಪ್ರಮಾಣ ವಚನ

ಬೆಂಗಳೂರು: ಕಾಂಗ್ರೆಸ್​ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆಬೀಳುವ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ರೇಸ್​ನಲ್ಲಿ ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಜಯವಾಗಿದೆ ಎನ್ನಲಾಗಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ. ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಸಿಎಂ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸ ಫಲ ನೀಡಿದ್ದು, ಸಂಜೆ ಒಳಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ … Continue reading ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಸದ್ಯದಲ್ಲೇ ಅಧಿಕೃತ ಘೋಷಣೆ, ನಾಳೆ ಪ್ರಮಾಣ ವಚನ