More

    ಪಟಾಕಿ ಗೋದಾಮಿಗೆ ಅಧಿಕಾರಿಗಳ ದಿಢೀರ್ ಭೇಟಿ

    ಧಾರವಾಡ: ನಗರದ ಪಟಾಕಿ ಸಂಗ್ರಹ ಮತ್ತು ಮಾರಾಟಗಾರರ ಉಗ್ರಾಣಗಳಿಗೆ ಅಧಿಕಾರಿಗಳ ತಂಡ ಬುಧವಾರ ರಾತ್ರಿ ದಿಢೀರ್ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿತು.
    ತಹಸೀಲ್ದಾರ್ ದೊಡ್ಡಪ್ಪ ಹೂಗಾರ ಹಾಗೂ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ ಕಂದಾಯ, ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆ ಅಽಕಾರಿಗಳ ತಂಡವು ಪರಿಶೀಲನೆ ನಡೆಸಿತು. ಪರವಾನಗಿಯಲ್ಲಿ ಸೂಚಿತ ಎಲ್ಲ ಷರತ್ತುಗಳನ್ನು ಪಾಲಿಸಿರುವ ಹಾಗೂ ನಿಯಮಾನುಸಾರ ಸುರಕ್ಷತಾ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
    ನಗರದ ಸವದತ್ತಿ ರಸ್ತೆಯ ಮೇದಾರ ಓಣಿಯಲ್ಲಿನ ಬಿ.ಜಿ. ಅತ್ತಾರ ಆ್ಯಂಡ್ ಬ್ರದರ್ಸ್ ಪಟಾಕಿ ಸಂಗ್ರಹ, ಮಾರಾಟ ಉಗ್ರಾಣ, ಶ್ರೀನಗರ ಕ್ರಾಸ್‌ನಲ್ಲಿನ ವಿ.ಎಚ್. ಕಂದಕೂರ ಉಗ್ರಾಣ, ರಾಮಾಶ್ರಯ ಬುಕ್ ಡಿಪೋ ರಸ್ತೆಯ ಎಸ್.ಕೆ. ಆಕಳವಾಡಿ ಉಗ್ರಾಣ, ಮದಿಹಾಳ ರಸ್ತೆಯ ಎಸ್.ಕೆ. ಜೋಶಿ ಉಗ್ರಾಣ, ಕೆಲಗೇರಿ ರಸ್ತೆಯ ಎಸ್.ಜಿ. ಬೆಣ್ಣಿ ಉಗ್ರಾಣಗಳಲ್ಲಿ ತಪಾಸಣೆ ನಡೆಸಲಾಯಿತು.
    ವಿಜಯ ದೊಡವಾಡ ಹಾಗೂ ಡಿ.ಎಸ್. ಆಕಳವಾಡಿ ಎಂಬ ಇಬ್ಬರು ಲೈಸೆನ್ಸ್ ನವೀಕರಣ ಮಾಡಿಕೊಳ್ಳದಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.
    ತಹಸೀಲ್ದಾರ್ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ, ಇನ್‌ಸ್ಪೆಕ್ಟರ್‌ಗಳಾದ ದಯಾನಂದ ಶೇಗುಣಸಿ, ನಾಗಯ್ಯ ಕಾಡದೇವರಮಠ, ಸಂಗಮೇಶ ದಿಡಗಿನಾಳ, ಅಗ್ನಿಶಾಮಕ ಅಽಕಾರಿ ಅವಿನಾಶ ಹಾಗೂ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಽಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts