

ಕುಂದಾಪುರ: ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರೀಯ ಕ್ಷಯರೋಗ ವಿಭಾಗದ ಮುಖ್ಯ ಸಹಾಯಕ ನಿರ್ದೇಶಕ ಡಾ.ರಘುರಾಮ್, ವಿಶ್ವ ಆರೋಗ್ಯ ಸಂಸ್ಥೆಯ ರಾಷ್ಟ್ರೀಯ ಸಲಹೆಗಾರ ಡಾ.ಮ್ರಿಜೆನ್ ದೆಖ, ಕೇಂದ್ರೀಯ ಕ್ಷಯ ರೋಗ ವಿಭಾಗದ ತಾಂತ್ರಿಕ ಅಧಿಕಾರಿ ಶಶಾಂಕ್ ಮಾಳವಿಯ ಮತ್ತು ಕೆಎಚ್ಪಿಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಎಚ್.ಎಚ್ ವಂಡ್ಸೆ ಗ್ರಾಪಂಗೆ ಶುಕ್ರವಾರ ಭೇಟಿ ನೀಡಿದರು.
ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ ಹಾಗೂ ಗ್ರಾಪಂನ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದರು. ಗ್ರಾಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಉದಯ ಕುಮಾರ್ ಶೆಟ್ಟಿ ಅವರು ವಂಡ್ಸೆ ಗ್ರಾಪಂ ವ್ಯಾಪ್ತಿಯಲ್ಲಿ ಸಿದ್ಧವಾಗುತ್ತಿರುವ ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ ಬಗ್ಗೆ ಮಾಹಿತಿ ನೀಡಿದರು. ಕೆಎಚ್ಪಿಟಿಯ ಡಾ.ಸ್ವರೂಪ್, ಅ್ಯನ್ನಾ ಫರ್ನಾಂಡಿಸ್, ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವಧರ್ನ ಜೋಗಿ, ಪಿಡಿಒ ಪೂರ್ಣಿಮಾ, ಕಾರ್ಯದರ್ಶಿ ಸುರೇಶ್, ಸಿಬ್ಬಂದಿ ಉಪಸ್ಥಿತರಿದ್ದರು.