ಜುಲೈ 7ರಂದು ಯೋಗಾಸನ ಶಿಬಿರ

Published on

ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಜುಲೈ 7ರ ಸಂಜೆ 5 ರಿಂದ 6.30ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ. ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು. ಅಂತರಾಷ್ಟ್ರೀಯ ಯೋಗದಿನಾಚರಣೆಯ ಪೂರ್ವಭಾವಿ ತಯಾರಿಯ ಯೋಗಾಭ್ಯಾಸ. ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net