More

    ಮೀಸಲಾತಿ ಅನ್ಯಾಯ ಕೇಂದ್ರಕ್ಕೆ ಮನವರಿಕೆ; ಮಾಜಿ ಸಿಎಂ ಬಿಎಸ್‌ವೈ ಭರವಸೆ

    ಶಿವಮೊಗ್ಗ: ಒಕ್ಕಲಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿಯಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರಕ್ಕೆ ಶಕ್ತಿ ಮೀರಿ ಮನವರಿಕೆ ಮಾಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
    ಗುರುವಾರ ಜಿಲ್ಲಾ ಒಕ್ಕಲಿಗ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆ ಸಮಾರಂಭದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದ ಒಬಿಸಿ ಮೀಸಲಾತಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಸೌಲಭ್ಯ ಕಲ್ಪಿಸುವಲ್ಲಿ ತಾರತಮ್ಯ ಆಗುತ್ತಿರುವ ಬಗ್ಗೆ ಒಕ್ಕಲಿಗ ನಾಯಕರು ಹಾಗೂ ಸ್ವಾಮೀಜಿಗಳು ಗಮನ ಸೆಳೆದಿದ್ದಾರೆ. ಈ ಬಗ್ಗೆ ಮುತುವರ್ಜಿ ವಹಿಸಿ ಮೀಸಲಾತಿ ಹೆಚ್ಚಳಕ್ಕೆ ಪ್ರಯತ್ನ ಮಾಡಲಾಗುವುದು ಎಂದರು.
    ಶಿವಮೊಗ್ಗ ಶಿವಶರಣರ ನಾಡಾಗಿದ್ದು ಅವರ ಆಚಾರ, ವಿಚಾರ, ಸಂಸ್ಕೃತಿಯನ್ನು ಪಾಲಿಸಿಕೊಂಡು ಬಂದಿದ್ದೇವೆ. ಡಿಸಿಎಂ, ಸಿಎಂ ಆಗಿದ್ದಾಗ ಜಾತಿ, ಕುಲ,ಬೇಧ ಮಾಡದೇ ಎಲ್ಲ ಸಮುದಾಯಕ್ಕೂ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ. ಅಧಿಕಾರ, ಸ್ಥಾನಮಾನ ಇಲ್ಲದಿದ್ದರೂ ಮುಂಬರುವ ದಿನಗಳಲ್ಲಿ ಎಲ್ಲ ಸಮಾಜದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಾಧನೆ ಮಾತನಾಡಬೇಕೇ ವಿನಃ ಮಾತು ಸಾಧನೆ ಆಗಬಾರದು ಎಂಬುದು ನನ್ನ ಧ್ಯೇಯ ಎಂದು ಹೇಳಿದರು.
    ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿರಿಬೈಲ್ ಧರ್ಮೇಶ್ ಮಾತನಾಡಿದರು. ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಎನ್.ಎಚ್.ಶ್ರೀಕಾಂತ್ ಪ್ರಸ್ತಾವಿಕ ಮಾತನಾಡಿದರು.
    ಶಾಸಕ ಕೆ.ಬಿ.ಅಶೋಕನಾಯ್ಕ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಶ್ರೀ ವೀರಶೈವ ಬಸವೇಶ್ವರ ಸೇವಾ ಸಮಾಜ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಪಾಲಿಕೆ ಸದಸ್ಯರಾದ ಸುವರ್ಣಾ ಶಂಕರ್, ಯಮುನಾ ರಂಗೇಗೌಡ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts