More

    ವೃದ್ಧಾಶ್ರಮ ನಾಗರಿಕ ಸಮಾಜಕ್ಕೆ ಕಪ್ಪು ಚುಕ್ಕೆ

    ಹುಬ್ಬಳ್ಳಿ: ಯುವ ಪೀಳಿಗೆ ತಂದೆ-ತಾಯಿಯನ್ನು ಸಲಹುವುದೇ ದುಸ್ತರ ಎಂದು ಭಾವಿಸಿಕೊಂಡಂತಿದೆ. ಹೀಗಾಗಿ ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪರಿಪಾಠ ಹೆಚ್ಚಾಗಿದೆ. ನಿಜಕ್ಕೂ ಇಂಥ ಪದ್ಧತಿ ನಾಗರಿಕ ಸಮಾಜಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಬೇಸರ ವ್ಯಕ್ತಪಡಿಸಿದರು.

    ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಸ್ಥೆಯಿಂದ ಹುಬ್ಬಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಹಿರಿಯರ ಮಾತು ಕೇಳುವವರು ಜೀವನದಲ್ಲಿ ಉತ್ತಮ ಸಾಧನೆ ಮಾಡಬಲ್ಲರು. ಹಿರಿಯರ ಮಾರ್ಗದರ್ಶನ ಇಂದಿನ ಯುವ ಸಮೂಹಕ್ಕೆ ಅಗತ್ಯವಾಗಿದ್ದು, ಅವರು ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳು, ಸಂಸ್ಕಾರ ಹಾಗೂ ಅನುಭವಗಳು ಎಲ್ಲರಿಗೂ ದಾರಿದೀಪವಾಗಬೇಕು ಎಂದರು.

    ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿಯೊಬ್ಬರೂ ಉತ್ತಮ ಜೀವನ ನಡೆಸಲಿ ಎಂಬ ಉದ್ದೇಶದಿಂದಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿ ಹಿರಿಯ ನಾಗರಿಕರ, ಬಡವರ ಸಬಲಿಕರಣಕ್ಕಾಗಿ 5 ಗ್ಯಾರಂಟಿಗಳನ್ನು ಜಾರಿಗೆ ತಂದು ಬಡವರ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುತ್ತಿದೆ ಎಂದರು.

    ಶಾಸಕ ಮಹೇಶ ಟೆಂಗಿನಕಾಯಿ ಅವರು ವಿಶ್ವ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಸಂಘದ ಅಧ್ಯಕ್ಷ ಬಿ.ಎ.ಪಾಟೀಲ, ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts