More

    ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದ ಹಳೆಯ ಶಿಷ್ಯರು; ಡಿಕೆಶಿ ಪರ ಪರೋಕ್ಷವಾಗಿ ಬ್ಯಾಟ್ ಬೀಸಿದ ಬಿಜೆಪಿ

    ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಯ್ಕೆ ಜಟಿಲವಾಗಿರು ಸಂದರ್ಭದಲ್ಲಿಯೇ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆನ್ನಿಗೆ ನಿಂತಿದೆ. ಈ ನಡುವೆಯೇ ಬಿಜೆಪಿಯಲ್ಲಿರುವ ಕಾಂಗ್ರೆಸ್‌ನ ಮಾಜಿ ನಾಯಕರು ಹಾಗೂ ಸಿದ್ದರಾಮಯ್ಯ ಆಪ್ತರೂ ಸಹ ಹಳೆಯ ವಿಚಾರ ಕೆದಕಿ ಡಿಕೆಶಿ ಪರ ಪರೋಕ್ಷವಾಗಿ ಬ್ಯಾಟ್ ಬೀಸಿದ್ದಾರೆ.

    ಮಾಜಿ ಸಚಿವ ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿ, ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ‌. 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದು ಹಳೆಯ ಘಟನೆ ಮೆಲುಕು ಹಾಕಿದ್ದಾರೆ.

    2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದಿದ್ದಾರೆ.
    ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಕುಟುಕಿದ್ದಾರೆ.

    ದನ್ನೂ ಓದಿ: ಶೀಘ್ರದಲ್ಲೇ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ ಪ್ರವೀಣ್ ಸೂದ್; ಟ್ವೀಟ್ ಮೂಲಕ ವಿದಾಯ

    ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ತಪ್ಪಾಗಲಾರದು ಎಂದು ಮಾಜಿ ಸಚಿವ, ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

    ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಈಡೇರದ ಕಾರಣ ನಾವು ಪಕ್ಷ ತೊರೆಯಬೇಕಾಯಿತು ಎಂದಿದ್ದಾರೆ.

    ಗಾಂಜಾ ಬಿಸ್ಕೆಟ್​​ ಸೇವಿಸಿ ಇಬ್ಬರು ಸಹೋದರರು ಅಸ್ವಸ್ಥ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts