ಮೂರು ವರ್ಷದ ಮಗುವನ್ನೂ ಬಿಡದ ಕಾಮುಕ ಮುದುಕ; ಅತ್ಯಾಚಾರ ಆರೋಪಿಯ ಬಂಧನ..

Arrest
Published on

ತ್ರಿಪುರ: ಮೂರು ವರ್ಷದ ಮಗುವನ್ನೂ ಬಿಡದ ಕಾಮುಕ ಮುದುಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ದಿನಗಳ ಹಿಂದೆ ಅತ್ಯಾಚಾರ ಮಾಡಿದ್ದ ಈ ಆರೋಪಿಯನ್ನು ಕೊನೆಗೂ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ತ್ರಿಪುರದಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.

ತ್ರಿಪುರದ ಧಲಾಯಿ ಜಿಲ್ಲೆಯಲ್ಲಿ 64 ವರ್ಷದ ವ್ಯಕ್ತಿಯೊಬ್ಬ ತನ್ನ ನೆರೆಮನೆಯ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಪಾಲಕರು ನೀಡಿದ್ದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನ. 11ರಂದು ಈತ ಅತ್ಯಾಚಾರ ಮಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಇದು ತ್ರಿಪುರದಲ್ಲಿ ಕಳೆದ ಕೆಲವು ವಾರಗಳಲ್ಲಿ ನಡೆದ ಮಕ್ಕಳ ಮೇಲಿನ ಅತ್ಯಾಚಾರಗಳ ಪೈಕಿ ಮೂರನೆಯದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net