ಬೆಂಗಳೂರು ನೋಟು ವಿನಿಮಯ, ಆರ್​ಬಿಐ ಅಧಿಕಾರಿ ಸೆರೆ

ಬೆಂಗಳೂರು: 1.51 ಕೋಟಿ ರೂಪಾಯಿ ಮೌಲ್ಯದ ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ವಿನಿಮಯ ಮಾಡಿದ ಪ್ರಕರಣದಲ್ಲಿ ಷಾಮೀಲಾದ ಆರೋಪದಲ್ಲಿ ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ ಬಿ ಐ) ಹಿರಿಯ ಅಧಿಕಾರಿಯೊಬ್ಬರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬೆಂಗಳೂರಿನಲ್ಲಿ ಮಂಗಳವಾರ ಬಂಧಿಸಿತು. ಕಮಿಷನ್ ಸಲುವಾಗಿ ಈ ಅಧಿಕಾರಿ ಹಳೆ ನೋಟುಗಳನ್ನು ಬದಲಾಯಿಸಿಕೊಂಡು ದಂಧೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ದೇಶಾದ್ಯಂತ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತು ಪೊಲೀಸರು ನಿರಂತರ ದಾಳಿ ನಡೆಸಿ ಹೊಸ ನೋಟುಗಳನ್ನು ವಶಪಡಿಕೊಳ್ಳುತ್ತಿರುವ ಸಮಯದಲ್ಲೇ ಆರ್​ಬಿಐ ಅಧಿಕಾರಿಯ ಬಂಧನವಾಗಿರುವುದು ವಿಶೇಷ ಎಂದು ವರದಿಗಳು ಹೇಳಿವೆ.

ಇದಕ್ಕೆ ಮುನ್ನ ಕರ್ನಾಟಕದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು 7 ಮಂದಿ ಮಧ್ಯವರ್ತಿಗಳನ್ನು ಬಂಧಿಸಿ 93 ಲಕ್ಷ ರೂಪಾಯಿ ಮೌಲ್ಯದ ಹೊಸ ನೋಟುಗಳನ್ನು ವಶ ಪಡಿಸಿಕೊಂಡಿದ್ದರು. ಅಕ್ರಮ ನೋಟು ವಿನಿಮಯ ದಂಧೆಯಲ್ಲಿ ಬ್ಯಾಂಕ್ ಅಧಿಕಾರಿಗಳೂ ಷಾಮೀಲಾಗಿರುವ ಪ್ರಕರಣಗಳು ಹೊರಬರುತ್ತಿರುವುದನ್ನು ಗೃಹ ಸಚಿವಾಲಯ ಇದೀಗ ಗಂಭೀರವಾಗಿ ಪರಿಗಣಿಸಿದೆ.

ಪ್ರಧಾನಿಯವರು ನವೆಂಬರ್ 8ರಂದು 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ಬಳಿಕ, ದೇಶಾದ್ಯಂತ ಈವರೆಗೆ ನಡೆದ ದಾಳಿಗಳಲ್ಲಿ 250 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಹಣವನ್ನು ವಶ ಪಡಿಸಿಕೊಳ್ಳಲಾಗಿದೆ.

ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *