More

    ಹಳೇಯ ಪಿಂಚಣಿ ಯೋಜನೆಗೆ ಒಳಪಡಿಸಲು ರಾಜ್ಯ ಸರ್ಕಾರದ ಆದೇಶ

    ಬೆಂಗಳೂರು:
    ದಿನಾಂಕ 1.4.2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾಗಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರಿ ಸೇವೆಗೆ ಸೇರಿದ ನೌಕರರನ್ನು ಹಳೇಯ ಡಿೆನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
    ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಸ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಬಹುದು ಎಂದು ಒಪ್ಪಿಗೆ ನೀಡಿದೆ.
    ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 20.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ, ನೇರವಾಗಿ ಸಲ್ಲಿಸತಕ್ಕದ್ದು, ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಷರತ್ತು ವಿಧಿಸಲಾಗಿದೆ.
    ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಮರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts