More

    ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕಾಳಜಿ ವಹಿಸಿ; ಡಾ. ಬಸವರಾಜ

    ರಾಣೆಬೆನ್ನೂರ: ಸರ್ಕಾರಿ ಶಾಲೆಗಳ ಬಗ್ಗೆ ಎಲ್ಲರೂ ಕಾಳಜಿ ಹೊಂದಬೇಕು. ಅಂದಾಗ ಮಾತ್ರ ಸರ್ಕಾರಿ ಶಾಲೆಗಳು ಮತ್ತು ಶಾಲೆಯಲ್ಲಿ ಕಲಿಯುವ ಮಕ್ಕಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸ್ತ್ರೀ ರೋಗ ವೈದ್ಯ ಡಾ. ಬಸವರಾಜ ಓಲೇಕಾರ ಹೇಳಿದರು.
    ತಾಲೂಕಿನ ಹಳೆಹೊನ್ನತ್ತಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಹೆಚ್ಚಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿತವರೆ ಉನ್ನತ ಸ್ಥಾನದಲ್ಲಿದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಕೀಳುರಿಮೆ ಬಿಟ್ಟು ಎಲ್ಲರೂ ಶಾಲೆಗಳನ್ನು ಉಳಿಸಿ ಬೆಳೆಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ಎಸ್‌ಡಿಎಂಸಿ ಅಧ್ಯಕ್ಷ ಹೊನ್ನಪ್ಪ ತಿಮ್ಮೇನಹಳ್ಳಿ, ನಿವೃತ್ತ ಪ್ರಾಚಾರ್ಯ ಎನ್.ಪಿ. ಮಾಚೇನಹಳ್ಳಿ, ಗ್ರಾಪಂ ಸದಸ್ಯೆ ಶೋಭಾ ನಿಟ್ಟೂರ, ರಂಗಕಲಾವಿದ ರಮೇಶ ಪಟ್ಟಣಶೆಟ್ಟಿ, ಪ್ರಾಚಾರ್ಯ ಎಚ್.ಬಿ. ಪಟ್ಟಣಶೆಟ್ಟಿ ಹಾಗೂ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts