

ಹೆಬ್ರಿ: ಹೆತ್ತ ತಂದೆ, ತಾಯಿ, ಕಲಿತ ಶಾಲೆಗಳನ್ನು ವಿದ್ಯಾರ್ಥಿಗಳು ಯಾವತ್ತೂ ಮರೆಯಬಾರದು. ಸರ್ಕಾರಿ ಶಾಲೆಗಳಿಗೆ ಹಳೇ ವಿದ್ಯಾರ್ಥಿಗಳೇ ಆಸ್ತಿ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಹಳೇ ವಿದ್ಯಾರ್ಥಿ ಸಂಘವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ 75ರ ಸಂಭ್ರಮದಲ್ಲಿರುವ ಈ ಶಾಲೆ ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಉತ್ತಮ ಶಾಲೆಯಾಗಿ ಬೆಳಗಬೇಕು ಎಂದರು.
ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸ್ ರಾವ್, ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ವಿಶ್ರಾಂತ ಪ್ರಾಧ್ಯಾಪಕ ಎನ್.ಎಸ್ ಶೆಟ್ಟಿ, ಉದ್ಯಮಿಗಳಾದ ನಟರಾಜ್ ಹೆಗ್ಡೆ, ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘಗಳ ಒಕ್ಕೂಟ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಣಿಪಾಲ ಎಂಐಟಿ ಪ್ರೊಫೆಸರ್, ಅಸೋಸಿಯೇಟ್ ಡೈರೆಕ್ಟರ್ ಡಾ.ಕಾಂತಿ ಮಲ್ಯ, ಹಿರಿಯ ಹಳೇ ವಿದ್ಯಾರ್ಥಿ ಎ.ರಾಮಚಂದ್ರ ರಾವ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಬಿ.ಎಲ್.ವಿಶ್ವಾಸ್, ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.