ಮುಳಬಾಗಿಲು: ರಾಷ್ಟ್ರೀಯ ಹೆದ್ದಾರಿ -75ರ ಕಾಮನೂರು ಗೇಟ್ ಬಳಿ ರಸ್ತೆ ದಾಟುತ್ತಿದ್ದಾಗ ಕಂಟೇನರ್ ಲಾರಿ ಡಿಕ್ಕಿಯಾಗಿ ವೃದ್ಧೆ ಮೃತಪಟ್ಟಿದ್ದಾರೆ.ತಾಲೂಕಿನ ಚಿಕ್ಕನಹಳ್ಳಿಯ ನಾರಾಯಣಮ್ಮ (85) ಮೃತೆ. ಚಿಕ್ಕನಹಳ್ಳಿಯಿಂದ ಕೋಲಾರ ತಾಲೂಕಿನ ಅಜ್ಜಪ್ಪನಳ್ಳಿಯಲ್ಲಿ ಇರುವ ಮೊಮ್ಮಗಳನ್ನು ನೋಡಿಕೊಂಡು ಬರಲು ಹೋಗಿದ್ದರು. ಅಜ್ಜಪ್ಪನಹಳ್ಳಿ ಬದಲು ಕಾಮನೂರು ಗೇಟ್ ಬಳಿ ಬಸ್ ಇಳಿದು ಗಾಬರಿಯಿಂದ ರಸ್ತೆ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಬಗ್ಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮುಳಬಾಗಿಲು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಬುಧವಾರ ಮರಣೋತ್ತರ ಪರೀಕ್ಷೆ ನಂತರ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಲಾರಿ ಡಿಕ್ಕಿಯಾಗಿ ವೃದ್ಧೆ ಸಾವು
You Might Also Like
ಹುಡುಗಿಯ ಹೃದಯವನ್ನು ಗೆಲ್ಲುವುದು ಹೇಗೆ..? Chanakya Niti
Chanakya Niti: ಈಗಿನ ಯಾವ ಹುಡುಗಿಯೂ ಹುಡುಗನ ಪ್ರೀತಿಯನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಚಾಣಕ್ಯನು ಪುರುಷನು…
ಕಂಕುಳಿನ ದುರ್ವಾಸನೆಯಿಂದ ಬೇಕಾ ಮುಕ್ತಿ? ಹಾಗಾದ್ರೆ ಈ ಸಿಂಪಲ್ ಟಿಪ್ ಅನುಸರಿಸಿ, ಆಮೇಲೆ ನೋಡಿ ಚಮತ್ಕಾರ!
Bad Odour: ವಿಪರೀತ ಬೆವರುವುದು ಇಂದು ಅನೇಕರ ಸಮಸ್ಯೆ. ಪ್ರತಿಯೊಬ್ಬರು ಬೆವರುತ್ತಾರೆ. ಆದರೆ, ಎಲ್ಲರೂ ಬೆವರುವ…
ನೋ ಜಿಮ್, ನೋ ಡಯಟ್… ಬರೋಬ್ಬರಿ 20 KG ತೂಕ ಇಳಿಕೆ, ಯುವತಿಯ ಆರೋಗ್ಯದ ಗುಟ್ಟು ರಟ್ಟು! Weight Loss
Weight Loss : ಇತ್ತೀಚೆಗೆ ತೂಕ ಇಳಿಕೆ ತುಂಬಾ ಸುಲಭವಾಗಿದೆ. ಏಕೆಂದರೆ, ತೂಕ ಇಳಿಕೆಗೆ ಹಲವು…