ಬಂಧಿಸಲ್ಪಟ್ಟಿರುವ ಒಮರ್​ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಹೇಗೆ ಸಮಯ ಕಳೆಯುತ್ತಿದ್ದಾರೆ ಗೊತ್ತಾ?

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಆ. 5 ರಂದು ರದ್ದು ಪಡಿಸಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ನ್ಯಾಷನಲ್​ ಕಾನ್ಫರೆನ್ಸ್​ ನಾಯಕ ಒಮರ್​ ಅಬ್ದುಲ್ಲಾ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿಯನ್ನು ಬಂಧಿಸಲಾಗಿದೆ.

ಕಳೆದ 12 ದಿನಗಳಿಂದ ಇವರನ್ನು ಬಂಧನದಲ್ಲಿರಿಸಲಾಗಿದೆ. ಆರಂಭದಲ್ಲಿ ಒಮರ್​ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿಯನ್ನು ಹರಿ ನಿವಾಸ್​ ಅರಮನೆಯಲ್ಲಿ ಇರಿಸಲಾಗಿತ್ತು. ಆದರೆ ಇಬ್ಬರೂ ನಾಯಕರು 370ನೇ ರದ್ದತಿ ಸಂಬಂಧ ಮಾತಿನ ಚಕಮಕಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಪ್ರತ್ಯೇಕ ಸ್ಥಳಗಳಲ್ಲಿ ಬಂಧಿಸಿ ಇಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದಾದ್ಯಂತ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಂವಹನ ಮಾಧ್ಯಮಗಳನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರಿಗೆ ಫೋನ್​, ಇಂಟರ್​ನೆಟ್​ ಸೇರಿದಂತೆ ಯಾವುದೇ ಸಂವಹನ ಮಾಧ್ಯಮಗಳು ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ತಮ್ಮ ಬಿಡುವಿನ ಸಮಯವನ್ನು ಕಳೆಯಲು ತಮ್ಮದೇ ಆದ ದಾರಿ ಕಂಡುಕೊಂಡಿದ್ದಾರೆ.

ಒಮರ್​ ಅಬ್ದುಲ್ಲಾ ತಮ್ಮ ಬಹುತೇಕ ಸಮಯವನ್ನು ವಿಡಿಯೋ ಗೇಮ್​ ಆಡುವುದರಲ್ಲಿ, ಫಿಲಂ ನೋಡುವುದರಲ್ಲಿ ಮತ್ತು ವ್ಯಾಯಾಮ ಮಾಡುವುದರಲ್ಲಿ ಕಳೆಯುತ್ತಿದ್ದಾರೆ. ಮತ್ತೊಂದೆಡೆ ಮೆಹಬೂಬಾ ಮುಫ್ತಿ ಪುಸ್ತಕಗಳನ್ನು ಓದುವುದರಲ್ಲಿ ಮತ್ತು ಪ್ರಾರ್ಥನೆ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೊಂದೆಡೆ ನ್ಯಾಷನ್​ ಕಾನ್ಫರೆನ್ಸ್​ ಮುಖ್ಯಸ್ಥ ಸಂಸದ ಫಾರೂಕ್​ ಅಬ್ದುಲ್ಲಾ ಇತ್ತೀಚೆಗೆ ತಮ್ಮ ನಿವಾಸದ ಸಮೀಪದ ಹೋಟೆಲ್​ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದರು. ಆ ನಂತರ ಅವರಿಗೆ ಮನೆಯಿಂದ ಹೊರಬರಲು ಅನುಮತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಕಣವೆ ರಾಜ್ಯದಲ್ಲಿ ಮುಖ್ಯವಾಹಿನಿಯ ರಾಜಕಾರಣಿಗಳು, ಪ್ರತ್ಯೇಕತಾವಾದಿಗಳು ಸೇರಿ ಸುಮಾರು 700 ಜನರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಅಥವಾ ಬಂಧಿಸಲಾಗಿದೆ. (ಏಜೆನ್ಸೀಸ್​)

One Reply to “ಬಂಧಿಸಲ್ಪಟ್ಟಿರುವ ಒಮರ್​ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಹೇಗೆ ಸಮಯ ಕಳೆಯುತ್ತಿದ್ದಾರೆ ಗೊತ್ತಾ?”

  1. ಒಳ್ಳೆಯ ಕೆಲಸ ಇವರನ್ನು permanent ಗಿ ಒಳಗೆ ಇಡಲಿ ದೇಶಕ್ಕೆ ಒಳ್ಳೆಯದು.

Leave a Reply

Your email address will not be published. Required fields are marked *