14ರಿಂದ ಬೆಳ್ತಂಗಡಿಯಲ್ಲಿ ಜೇಸಿ ಸಪ್ತಾಹ : ಸುಧಾಮ ಸ್ನೇಹ-ಸಾಧನೆ-ಸಮ್ಮಿಲನ : ಸಾಧನಾಶ್ರೀ, ಸೇವಾಶ್ರೀ ಪ್ರಶಸ್ತಿ ಪ್ರದಾನ

Published on

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೇಸಿ ಸಪ್ತಾಹ ಸುಧಾಮ ಸ್ನೇಹ-ಸಾಧನೆ-ಸಮ್ಮಿಲನ ಡಿ.14ರಿಂದ 20ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾ ಭವನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಎಚ್.ಡಿ.ಮತ್ತು ಜೇಸಿ ಸಪ್ತಾಹದ ಸಂಯೋಜಕಿ ಹೇಮಾವತಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 47ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಬೆಳ್ತಂಗಡಿ ಜೆಸಿಐ ಈ ವಷರ್ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಲಯಮಟ್ಟದಲ್ಲಿ ಅತ್ಯುತ್ತಮ ಘಟಕ, ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿಗೆ ಪಾತ್ರವಾಗಿದೆ. 14ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ. ಸಂಸದ ಬ್ರಿಜೇಶ್ ಚೌಟ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ. 15ರಂದು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಮೂಹ ಜನಪದ ಗೀತೆ, ಕೇರಂ, ಚೆಸ್ ಸ್ಪರ್ಧೆ, ಚುಕ್ಕಿ ರಂಗೋಲಿ ಮೊದಲಾದ ಸ್ಪರ್ಧೆ ನಡೆಯಲಿದೆ.

ಒಂದು ವಾರ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು 20ರಂದು ಸಮಾರೋಪ ಸಮಾರಂಭದಲ್ಲಿ ರಾಷ್ಟೀಯ ಹೆದ್ದಾರಿ ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಪ್ರಸಾದ್ ಅಜಿಲ, ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾನಿಂಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮುಳಿಯ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ, ಜಿ.ಪ. ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಜೆಸಿಐ ಪೂರ್ವ ವಲಯಾಧ್ಯಕ್ಷ ಸಂಪತ್ ಬಿ.ಸುವರ್ಣ, ಉದ್ಯಮಿ ಅಶ್ವತ್ ಹೆಗ್ಡೆ ಬಳಂಜ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಭಾಗವಹಿಸಲಿದ್ದಾರೆ. ಪ್ರತಿದಿನ ಸನ್ಮಾನ, ಸಾಧನಾ ಶ್ರೀ, ಸೇವಾಶ್ರೀ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.

ಸಾಂಸ್ಕೃಕ ಕಾರ್ಯಕ್ರಮದ ಅಂಗವಾಗಿ ತಾಲೂಕುಮಟ್ಟದ ನೃತ್ಯ ಸ್ಪರ್ಧೆ ನೃತ್ಯ ಸಿಂಚನ, ಡ್ಯಾನ್ಸ್ ಧಮಾಕಾ ರಾಜ್ಯಮಟ್ಟದ ಡ್ಯಾನ್ಸ್ ಸ್ಪರ್ಧೆ, ಸ್ಟಾರ್ ಸಿಂಗರ್ ಸ್ಪರ್ಧೆ, ತುಳುನಾಡು ಫ್ಯಾಶನ್ ಶೋ, ಗುರುವಾಯನಕೆರೆ ಯಕ್ಷ ಕಲಾ ಸಂಭ್ರಮ, ಆದರ್ಶ ದಂಪತಿಗಳು ಬೆಸ್ಟ್ ಜೋಡಿಯ ಮಸ್ತ್ ಶೋ, ಮಂಜೇಶ್ವರ ಶಾರದಾ ಆರ್ಟ್ಸ್ ಕಲಾವಿದರಿಂದ ಕಥೆ ಎಡ್ಡೆಂಡು ನಾಟಕ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಪೂರ್ವ ಅಧ್ಯಕ್ಷರಾದ ಚಿದಾನಂದ ಇಡ್ಯಾ, ನಾರಾಯಣ ಶೆಟ್ಟಿ, ಸಪ್ತಾಹದ ಸಹ ಸಂಯೋಜಕ ರಕ್ಷಿತ್ ಅಂಡಿಂಜೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net