ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಫೆ.15 ರಂದು ಮಧ್ಯಾಹ್ನ 12.30 ಗಂಟೆಗೆ ಏರ್ಪಡಿಸಲಾಗಿದೆ.
ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಉದ್ಘಾಟನೆ ಮಾಡುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್‌ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ಎಂ ನಾಗರಾಜ್, ವಿಧಾನಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಪಾಲಿಕೆ ಮೇಯರ್ ಬಿ.ಶ್ವೇತಾ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿರುವರು.
ಜಿಲ್ಲಾ ಆಸ್ಪತ್ರೆಯ ಉಪಮುಖ್ಯ ವೈದ್ಯಾಧಿಕಾರಿಗಳು ಹಾಗೂ ವೈದ್ಯಕೀಯ ದಾಖಲಾತಿ ವಿಭಾಗದ ಅಧಿಕಾರಿ ಡಾ.ಗುರುನಾಥ ಬಿ.ಚವ್ಹಾಣ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಯಂತಿಯ ಅಂಗವಾಗಿ ಮೆರವಣಿಗೆಯು ಮುನ್ಸಿಪಲ್ ಮೈದಾನದಿಂದ ಆರಂಭವಾಗಿ ಇಂದಿರಾ ವೃತ್ತ, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್‌ಠಾಣೆ, ತೇರು ಬೀದಿ, ಎಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವಾಲ್ಮೀಕಿ ಭವನದವರೆಗೆ ಸಾಗಿ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.