More

  16 ರಂದು ಮಾದಿಗರ ಆತ್ಮಗೌರವ ಸಮಾವೇಶ

  ಬಾಗಲಕೋಟೆ: ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದಿಂದ ಮಾದಿಗ ಮುನ್ನಡೆ, ಮಾದಿಗರ ಆತ್ಮಗೌರವ ಸಮಾವೇಶವನ್ನು ಡಿ.16 ರಂದು ನಗರದ ಚರಂತಿಮಠ ಶಿವಾನುಭವ ಮಂಟಪದಲ್ಲಿ ಬೆಳಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮುಖಂಡ ಶಿವಾನಂದ ಟವಳಿ ತಿಳಿಸಿದರು.

  ನಗರದ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಮಾಜಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಎಸ್ಸಿ-ಎಸ್ಟಿ ಆಯೋಗದ ಸದಸ್ಯ ವೆಂಕಟೇಶ ದೊಡ್ಡೇರಿ, ಸಾಯಿ ಕರ್ಮಚಾರಿ ನಿಗಮದ ಮಾಜಿ ಅಧ್ಯಕ್ಷ ದೇವೇಂದ್ರನಾಥ ಸೇರಿ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

  ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿಗೆ ಕೇಂದ್ರಕ್ಕೆ ಶಿಾರಸು ಮಾಡಿತ್ತು. ಕೇಂದ್ರ ಸರ್ಕಾರ ಒಳಮೀಸಲಾತಿ ಜಾರಿಗೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಡಿ.10 ರಿಂದ ರಾಜ್ಯಾದ್ಯಂತ ಈ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿ ನಗರದಲ್ಲೂ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

  ಸಂಘದ ರಾಜ್ಯಾಧ್ಯಕ್ಷ ಮುತ್ತಣ್ಣ ಬೆಣ್ಣೂರ ಮಾತನಾಡಿ, ಇದು ಕೇವಲ ಸಮಾವೇಶವಲ್ಲ. ಇಲ್ಲಿ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಬುದ್ಧಿಜೀವಿಗಳೊಂದಿಗೆ ಸಂವಾದ ಸಹ ಜರುಗಲಿದೆ. ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚಿನ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಸಂಘದ ಮುಖಂಡರಾದ ಕಾಂತಿಚಂದ್ರ ಜೋಶಿ, ಹನುಮಂತ ಮುತ್ತತ್ತಿ, ಸತೀಶ ಸೂಳಿಕೇರಿ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts