More

    ಜುಲೈ 20 ರಂದು ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ

    ಮೈಸೂರು: ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 20 ರಂದು ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಕಬಿನಿ ಜಲಾಶಯಕ್ಕೆ ಎರಡನೇ ಬಾರಿಗೆ ಬಾಗಿನ ಅರ್ಪಿಸಲು ಸಿದ್ಧರಾಗಿದ್ದಾರೆ. ಕಳೆದ ವರ್ಷ ನವೆಂಬರ್ ಮೊದಲ ವಾರದಲ್ಲಿ ಬಾಗಿ ಅರ್ಪಿಸಿದ್ದರು.


    ಅಂದು ಬೆಳಗ್ಗೆ 8.30ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಲಿರುವ ಅವರು, ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಮೈಸೂರಿನಿಂದ ಎಚ್.ಡಿ.ಕೋಟೆಯ ಬೀಚನಗಳ್ಳಿಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ, 11.30ರ ಶುಭ ಮುಹೂರ್ತದಲ್ಲಿ ಬಾಗಿನ ಅರ್ಪಿಸಿಸಲಿದ್ದಾರೆ. ಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಪ್ರತಾಪ್ ಸಿಂಹ, ಶಾಸಕರಾದ ಅನಿಲ್ ಚಿಕ್ಕಮಾದು, ಹರ್ಷವರ್ಧನ್, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಯತೀಂದ್ರ ಸಿದ್ದರಾಮಯ್ಯ, ಮಂಜುನಾಥ್ ಇತರೆ ಜನಪ್ರತಿನಿಧಿಗಳು ಸಾಥ್ ನೀಡಲಿದ್ದಾರೆ.


    2284.00 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ 2282.56 ಅಡಿ ನೀರು ಸಂಗ್ರಹಿಸಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2280.23 ಅಡಿ ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 33,630 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 33,313 ಕ್ಯೂಸೆಕ್ ನೀರನ್ನು ಹರಿಯ ಬಿಡಲಾಗುತ್ತಿದೆ. 19.52 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 18.59 ಟಿಎಂಸಿ ನೀರು ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 17.23 ಟಿಎಂಸಿ ನೀರು ಸಂಗ್ರಹವಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts