More

    22ಕ್ಕೆ ಬೆಂಗಳೂರಿನಲ್ಲಿ ಗ್ರಾಪಂ ನೌಕರರ ಬೃಹತ್ ಪ್ರತಿಭಟನೆ

    ಸಾಗರ: ಕನಿಷ್ಠ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶನಿವಾರ ಗ್ರಾಪಂ ನೌಕರರ ಸಂಘದ ಪದಾಧಿಕಾರಿಗಳು ತಾಪಂ ಇಒ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

    ಗ್ರಾಪಂಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರವಸೂಲಿಗಾರರು, ಕ್ಲರ್ಕ್, ಡಾಟಾ ಆಪರೇಟರ್ಸ್, ನೀರುಗಂಟಿಗಳು ಇತರರನ್ನು ಸರ್ಕಾರಿ ನೌಕರರು ಎಂದು ಘೋಷಣೆ ಮಾಡಬೇಕು. ಗ್ರಾಪಂ ನೌಕರರಿಗೆ ಕನಿಷ್ಠ 31ಸಾವಿರ ರೂ. ವೇತನ ನಿಗದಿಗೊಳಿಸಬೇಕು. ನಿವೃತ್ತರಾದ ನೌಕರರು ಅಥವಾ ಮರಣ ಹೊಂದಿದ ನೌಕರರ ಕುಟುಂಬ ಸದಸ್ಯರಿಗೆ ಪ್ರತಿ ತಿಂಗಳು ಕನಿಷ್ಠ 6 ಸಾವಿರ ಪಿಂಚಣಿ ನೀಡಬೇಕು. ನೌಕರರು ಕಂಪ್ಯೂಟರ್ ಜ್ಞಾನ ಹೊಂದಿದ್ದರೆ ಅವರನ್ನು ಡೇಟಾ ಆಪರೇಟರ್ ಆಗ ಪರಿಗಣಿಸಬೇಕು ಎಂದು ಆಗ್ರಹಿಸಿದರು.
    ಗ್ರಾಪಂ ಸಿಬ್ಬಂದಿಗೆ ವರ್ಗಾವಣೆ, ನೀರುಗಂಟಿಗಳಿಗೆ ನಿರ್ದಿಷ್ಟವಾದ ಕೆಲಸ ನಿಗದಿ, ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳ ನಿಗದಿ, ಲೆಕ್ಕ ಸಹಾಯಕರ ಹುದ್ದೆ ಸೃಷ್ಟಿ, ಸಾಳಪ್ಪ ವರದಿಯಂತೆ ಸ್ವಚ್ಛತಾಗಾರರ ನೇಮಕ, ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ, ಆರೋಗ್ಯ ವಿಮೆ, ಪಿಡಿಒಗಳಿಗೆ ಜಿಲ್ಲಾಮಟ್ಟದಲ್ಲಿ ಮುಂಬಡ್ತಿ ಸೇರಿದಂತೆ 18 ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರದ ಮೇಲೆ ಒತ್ತಡ ಹೇರಲು ಫೆ.22ರಂದು ಬೆಂಗಳೂರಿನಲ್ಲಿ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
    ಸಂಘದ ಅಧ್ಯಕ್ಷ ನಾಗೇಶ್ ಕೆ.ವಾಲೆ, ಪ್ರಮುಖರಾದ ಷಣ್ಮುಖ, ಮಂಜಪ್ಪ, ಸತೀಶ್, ನಾರಾಯಣಪ್ಪ, ಚಂದ್ರಶೇಖರ್, ಈಶ್ವರ, ಸಂತೋಷ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts