26ರಂದು ದಾಸೋಹ ದಿನ, ಶಿವಕುಮಾರ ಶ್ರೀ ಪುಣ್ಯಸ್ಮರಣೆ

ಮೈಸೂರು: ಅಖಿಲ ಕರ್ನಾಟಕ ಶಿವಕುಮಾರ ಮಹಾಸ್ವಾಮೀಜಿ ಭಕ್ತವೃಂದ ಸಮಿತಿಯಿಂದ ಜ.26ರಂದು ನಗರದಲ್ಲಿ ದಾಸೋಹ ದಿನ, ಡಾ.ಶ್ರೀಶಿವಕುಮಾರ ಸ್ವಾಮೀಜಿ ಆರನೇ ವರ್ಷದ ಪುಣ್ಯಸ್ಮರಣೆ ಆಯೋಜಿಸಲಾಗಿದೆ ಎಂದು ಮೈಸೂರು ಜಿಲ್ಲಾ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷ ನಾಗರಾಜ್ ವಿ.ಬೈರಿ ತಿಳಿಸಿದರು.
ನಗರದ ಜಗನ್ಮೋಹನ ಅರಮನೆಯಲ್ಲಿ ಮಧ್ಯಾಹ್ನ 3 ಗಂಟೆಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧ್ದಗಂಗಾ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ, ಕಿರಿಯ ಶ್ರೀಗಳಾದ ಶ್ರೀಶಿವಸಿದ್ದೇಶ್ವರ ಸ್ವಾಮೀಜಿ, ಹೊಸಮಠದ ಶ್ರೀಚಿದಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಸದರಾದ ಡಾ.ಸಿ.ಎನ್.ಮಂಜುನಾಥ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಸಂಸದ ಪ್ರತಾಪಸಿಂಹ, ನಟ ಡಾಲಿ ಧನಂಜಯ, ವಿಧಾನ ಪರಿಷತ್ತಿನ ಸದಸ್ಯ ಕೆ.ವಿವೇಕಾನಂದ, ಪತ್ರಕರ್ತರ ಅಂಶಿಪ್ರಸನ್ನಕುಮಾರ್, ಬಸವಮಾರ್ಗ ಫೌಂಡೇಷನ್‌ನ ಎಸ್.ಬಸವರಾಜು, ಕಾಯಕಯೋಗಿ ಫೌಂಡೇಷನ್‌ನ ಎಂ.ಶಿವಕುಮಾರ್, ಲಿಂಗಾಯತ ಮಹಾಸಭಾದ ಎಂ.ಎಸ್.ಮಂಜುನಾಥ್ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮಧ್ಯಾಹ್ನ 3 ಗಂಟೆಗೆ ಪ್ರಜಾಕಿರಣ ಚಾರಿಟಬಲ್ ಟ್ರಸ್ಟ್‌ನಿಂದ ಸಿದ್ಧಗಂಗಾ ಶ್ರೀಗಳ ಜೀವನಚರಿತ್ರೆ ನಾಟಕ ಪ್ರದರ್ಶನ, ಸಂಜೆ 4 ಗಂಟೆಗೆ ಅಪೇಕ್ಷಾ ನೃತ್ಯ ಕಲಾ ತಂಡದಿಂದ ಭಕ್ತಿ ಸಂಗಮ, ಭಕ್ತಿಗೀತೆ ಹಾಗೂ ಭರತನಾಟ್ಯ ಆಯೋಜಿಸಲಾಗಿದೆ. ಸಂಜೆ 5ಕ್ಕೆ ಸಭಾ ಕಾರ್ಯಕ್ರಮವಿದ್ದು, ವಿವಿಧ ಕ್ಷೇತ್ರಗಳ 48 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಸಮಿತಿಯ ಸಂಚಾಲಕ ಡಾ.ಕೆ.ವಸಂತಕುಮಾರ್ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಮಧ್ಯಾಹ್ನ 3ರಿಂದ ರಾತ್ರಿ 9ರವರೆಗೆ ನಿರಂತರ ದಾಸೋಹ ನಡೆಯಲಿದೆ ಎಂದರು.
ಸಮಿತಿ ಗೌರವ ಅಧ್ಯಕ್ಷ ನ.ಗಂಗಾಧರಪ್ಪ, ಅಧ್ಯಕ್ಷ ಆರ್.ಎಸ್.ರಾಜು, ಪ್ರಮುಖರಾದ ಬೆಟ್ಟೇಗೌಡ, ಕೃಷ್ಣೋಜಿರಾವ್, ಸಂಯೋಜಕರಾದ ಎ.ಪಿ.ವಿರೂಪಾಕ್ಷ, ಕೆ.ವಿ.ಮಲ್ಲೇಶ್, ದಾರಿಪುರ ಚಂದ್ರಶೇಖರ್ ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…