More

    ಅ.28ರಂದು ಮಹರ್ಷಿ ವಾಲ್ಮೀಕಿ ಜಯಂತಿ, ಜಿಲ್ಲಾಡಳಿತದಿಂದ ಪೂರ್ವಭಾವಿ ಸಭೆ

    ವಿಜಯಪುರ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.

    ಅ. 28 ರಂದು ಜಿಲ್ಲಾಡಳಿತದಿಂದ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ಅಂದು ಬೆಳಗ್ಗೆ 9 ಕ್ಕೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ಲ ಹನುಮಂತರಾಯ ರಂಗಮಂದಿರದವರೆಗೆ ಭಾವಚಿತ್ರ ಬೃಹತ್ ಮೆರವಣಿಗೆ ನಡೆಯಲಿದೆ. ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಲಿವೆ. ಮಹಾತ್ಮ ಗಾಂಧಿ, ಬಸವೇಶ್ವರ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಕನಕದಾಸರ ವೃತ್ತದ ಮಾರ್ಗವಾಗಿ ಮೆರವಣಿಗೆ ರಂಗಮಂದಿರದ ತಲುಪಲಿದೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಅವರು ವಿವರಿಸಿದರು.

    ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಅತಿಥಿಗಳಿಗೆ ಆಹ್ವಾನ, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ, ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದು ಸೇರಿದಂತೆ ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯ ರೂಪುರೇಷೆ ಸಿದ್ಧಪಡಿಸಿಕೊಳ್ಳುವುದು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

    ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ತಹಸೀಲ್ದಾರ್ ಕವಿತಾ, ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಟಿ.ವಿ. ಮಂಟೂರ ಮುಖಂಡರಾದ ಮಲ್ಲಿಕಾರ್ಜುನ ಬಟಗಿ, ಸೋಮು ಜಮಾದಾರ, ಮರಳಸಿದ್ಧ ನಾಯ್ಕೋಡಿ, ಸಾಯಿಕುಮಾರ ಬಿಸ್ನಾಳ, ಮಹಾದೇವ ವಾಲೀಕಾರ, ಬಿ.ಎಸ್. ಗಸ್ತಿ, ಗಿರೀಶ ಕುಲಕರ್ಣಿ, ಭೀಮರಾ ಜಿಗಜಿಣಗಿ, ದೇವೇಂದ್ರ ಮಿರೇಕರ್ ಮತ್ತಿತರರು ಉಪಸ್ಥಿರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts