More

    29 ರಂದು ‘ಯುವ ಸಂಪರ್ಕ ಅಭಿಯಾನ’ ಹಾಗೂ ‘ಯುವರಾಜರ ಜತೆ ಯುವ ಸಂವಾದ’: ಆರ್.ರಾಕೇಶ್‌ಗೌಡ

    ಮೈಸೂರು: ಬಿಜೆಪಿ ಯುವ ಮೋರ್ಚಾ ಮೈಸೂರು ನಗರ ಘಟಕದ ವತಿಯಿಂದ ಮಾ.29ರಂದು ಕುವೆಂಪುನಗರದ ಬಂದಂತಮ್ಮ ಕಾಳಮ್ಮ ಸಮುದಾಯ ಭವನದಲ್ಲಿ ‘ಯುವ ಸಂಪರ್ಕ ಅಭಿಯಾನ’ ಹಾಗೂ ‘ಯುವರಾಜರ ಜತೆ ಯುವ ಸಂವಾದ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಘಟಕದ ಅಧ್ಯಕ್ಷ ಆರ್.ರಾಕೇಶ್‌ಗೌಡ ಹೇಳಿದರು.

    ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಮಾಹಿತಿ ನೀಡಿದರು.

    ಅಂದು ಸಂಜೆ 5 ಗಂಟೆಗೆ ಕೆ.ಜಿ.ಕೊಪ್ಪಲಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ದೇವಸ್ಥಾನದ ಮುಂಭಾಗದಿಂದ ಬಂದಂತಮ್ಮ ಕಾಳಮ್ಮ ಸಮುದಾಯ ಭವನದವರೆಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಮೆರವಣಿಗೆ ನಡೆಯಲಿದೆ. ಸಂಜೆ 5.30ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದರು.

    ‘ಯುವರಾಜರ ಜತೆ ಯುವ ಸಂವಾದ’ ಹೆಸರಿನಲ್ಲಿ ಯದುವೀರ್ ಅವರೊಂದಿಗೆ ಹೊಸ ಮತದಾರರ ಸಂವಾದ ನಡೆಯಲಿದೆ. ಸಂವಾದದಲ್ಲಿ ಇದೇ ಪ್ರಥಮ ಬಾರಿಗೆ ಮತದಾನ ಮಾಡುತ್ತಿರುವ ಪದವಿ, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜಿನ 2 ರಿಂದ 3 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಮೈಸೂರಿಗೆ ರಾಜವಂಶಸ್ಥರ ಕೊಡುಗೆ, ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ತಂದಿರುವ ಯೋಜನೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಜತೆಗೆ ಬ್ರಾೃಂಡ್ ಮೈಸೂರು ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಯದುವೀರ್ ಅವರಲ್ಲಿರುವ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಶಾಸಕರಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ಮಾಜಿ ಶಾಸಕ ಸಾ.ರಾ.ಮಹೇಶ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅನಿಲ್ ಥಾಮಸ್, ಮಾಜಿ ಮೇಯರ್ ಸಂದೇಶ್ ಸ್ವಾಮಿ, ಮುಖಂಡ ಕವೀಶ್ ಗೌಡ ಭಾಗವಹಿಸಲಿದ್ದಾರೆ ಎಂದರು.

    ಮುಖಂಡರಾದ ಎಂ.ಜೆ.ಕಿರಣ್‌ಗೌಡ, ಸಚಿನ್, ಮಹೇಶ್ ರಾಜೇ ಅರಸ್, ಕೀರ್ತಿ, ಅರ್ಜುನ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts