6ರಂದು ಗ್ರಾಪಂ ನೌಕರರಿಂದ ಜಿ.ಪಂ.ಚಲೋ

ಬೆಳಗಾವಿ: ಕನಿಷ್ಠ ವೇತನ, ಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೇ 6ರಂದು ಜಿಲ್ಲಾ ಪಂಚಾಯಿತಿ ಚಲೋ ನಡೆಸಲು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ನಿರ್ಧರಿಸಿದೆ.

ಗ್ರಾ.ಪಂ.ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೇ 6ರಂದು ಬೆಳಗ್ಗೆ 11ಗಂಟೆಗೆ ನಗರದ ಅಂಬೇಡ್ಕರ್ ಉದ್ಯಾನವನದಿಂದ ಜಿಪಂವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಈಗಾಗಲೇ ಎಲ್ಲ ಗ್ರಾಪಂ ನೌಕರರಿಗೆ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಸೂಚಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ವಿ.ಪಿ.ಕುಲಕರ್ಣಿ ತಿಳಿಸಿದ್ದಾರೆ.

ಗ್ರಾ.ಪಂ.ಗಳಲ್ಲಿ ಉದ್ಯೋಗ ಭದ್ರತೆಯಿಲ್ಲದೆ ಕೆಲಸ ಮಾಡುತ್ತಿರುವ ನೌಕರರಿಗೆ ಸರ್ಕಾರದ ನಿಧಿಯಿಂದ ವೇತನ ನೀಡಬೇಕು ಎಂದು 30 ವರ್ಷಗಳಿಂದ ನಿರಂತರ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. 2018ರಿಂದ ಸರ್ಕಾರದ ನಿಧಿಯಿಂದಲೇ ವೇತನ ಭರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಇಲ್ಲಿಯವರೆಗೆ ಯಾವುದೇ ನೌಕರನಿಗೆ ವೇತನ ಪಾವತಿಯಾಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.